ವಿಧಾನಸಭೆ ಕಲಾಪ ನಾಳೆಗೆ ಮುಂದೂಡಿಕೆ, ಬಿಜೆಪಿಯಿಂದ ಅಹೋರಾತ್ರಿ ಹೋರಾಟ
ವಿಶ್ವಾಸಮತ ಯಾಚನೆ ಚರ್ಚೆಗಾಗಿ ಸೇರಿದ್ದ ವಿಧಾನಸಭೆ ಆಡಳಿತ ಹಾಗೂ ವಿರೋಧ ಪಕ್ಷಗಳ ನಾಯಕರ ಗದ್ದಲದಿಂದ ತುಂಬಿದ್ದು ಕಡೆಗೆ ಸದನವನ್ನು ನಾಳೆ ಬೆಳಿಗ್ಗೆ ಹನ್ನೊಂದಕ್ಕೆ ಮುಂದೂಡಲಾಗಿದೆ.

Published On :
ಬೆಂಗಳೂರು: ವಿಶ್ವಾಸಮತ ಯಾಚನೆ ಚರ್ಚೆಗಾಗಿ ಸೇರಿದ್ದ ವಿಧಾನಸಭೆ ಆಡಳಿತ ಹಾಗೂ ವಿರೋಧ ಪಕ್ಷಗಳ ನಾಯಕರ ಗದ್ದಲದಿಂದ ತುಂಬಿದ್ದು ಕಡೆಗೆ ಸದನವನ್ನು ನಾಳೆ ಬೆಳಿಗ್ಗೆ ಹನ್ನೊಂದಕ್ಕೆ ಮುಂದೂಡಲಾಗಿದೆ.
ಈ ನಡುವೆ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ನಾಯಕರು ಸದನದಲ್ಲೇ ಅಹೋರಾತ್ರಿ ಹೋರಾಟ ನಡೆಸಲು ನಿರ್ಧರಿಸಿದ್ದಾರೆ.
ವಿಶ್ವಾಸ ಮತಯಾಚನೆಗೆ ಸ್ಪೀಕರ್ ವಿಳಂಬ ಂಆಡುತ್ತಿದ್ದಾರೆ ಎಂಬ ವಿಚಾರದಲ್ಲಿ ಸದನದಲ್ಲಿ ಭಾರೀ ಕೋಲಾಹಲ ಏರ್ಪಟ್ಟ ಹಿನ್ನೆಲೆಯಲ್ಲಿ ರಾಜ್ಯಪಾಲರು ಇಂದೇ ವಿಶ್ವಾಸಮತ ಪ್ರಕ್ರಿಯೆ ಮುಗಿಸುವಂತೆ ಸ್ಪೀಕರ್ ಗೆ ಸಂದೇಶ ರವಾನಿಸಿದ್ದರು. ಆದರೆ ಅದಾಗಲೇ ಸ್ಪೀಕರ್ ರಮೇಶ್ ಕುಮಾರ್ ತಾವು ಎಜೆ ಉದಯ್ ಹೊಳ್ಳ ಜತೆ ವಿಪ್ ಜಾರಿ ಸಂಬಂಧ ಚರ್ಚೆಗೆ ತೆರಳಿದ್ದ ಕಾರಣ ಸದನವನ್ನು ಉಪಸಭಾಪತಿಗಳು ಮುನ್ನಡೆಸಿದ್ದರು.
ಸದನದಲ್ಲಿ ಗಲಾಟೆ, ಗದ್ದಲ ಮುಂದುವರಿದು ಆಡಳಿತ ಪಖ್ಷದವರೇ ಆಪರೇಶನ್ ಕಮಲ ವಿರುದ್ಧ ಸಿಡಿದು ಪ್ರತಿಭಟಿಸಿದರೆ ಬಿಜೆಪಿ ವಿಶ್ವಾಸಮತ ಯಾಚನೆ ನಡೆಸಿ ಎಂದು ಪ್ರತಿಭಟಿಸಿದೆ.
ಕಡೆಗೆ ಉಪಸಭಾಪತಿಗಳು ನಾಳೆ (ಶುಕ್ರವಾರ) ಬೆಳಿಗ್ಗೆ ಹನ್ನೊಂದಕ್ಕೆ ಸದನದ ಕಲಾಪವನ್ನು ಮುಂದೂಡಿ ಆದೇಶಿಸಿದ್ದಾರೆ.
ಆದರೆ ಸದನದಲ್ಲಿ ವಿಶ್ವಾಸಮತ ಯಾಚನೆ ಆಗುವವರೆಗೆ ಅಹೋರಾತ್ರಿ ಹೋರಾಟ ನಡೆಸುವುದಾಗಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್JDSbjpಬಿಜೆಪಿಜೆಡಿಎಸ್Karnataka Assemblyಕರ್ನಾಟಕ ವಿಧಾನಸಭೆKarnataka crisisಕರ್ನಾಟಕ ಬಿಕ್ಕಟ್ಟು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


