ರಾಮಲಿಂಗಾ ರೆಡ್ಡಿ ದ್ರೋಹ ಎಸಗಿದ್ದಾರೆ, ನಾವು ಅವರನ್ನು ಅನುಸರಿಸುವುದಿಲ್ಲ: ಅತೃಪ್ತ ಶಾಸಕರು
ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಕೊನೆ ಕ್ಷಣದಲ್ಲಿ ಮೋಸ ಮಾಡಿದ್ದಾರೆ: ಹೀಗಾಗಿ ನಾವು ಯಾವುದೇ ಕಾರಣಕ್ಕೂ ಅವರನ್ನು ಫಾಲೋ ಮಾಡಲ್ಲ ಎಂದು ...

Published On :
ಬೆಂಗಳೂರು: ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಕೊನೆ ಕ್ಷಣದಲ್ಲಿ ಮೋಸ ಮಾಡಿದ್ದಾರೆ: ಹೀಗಾಗಿ ನಾವು ಯಾವುದೇ ಕಾರಣಕ್ಕೂ ಅವರನ್ನು ಫಾಲೋ ಮಾಡಲ್ಲ ಎಂದು ಮುಂಬಯಿಯಿಂದ ಅತೃಪ್ತ ಶಾಸಕರು ಸಂದೇಶ ರವಾನಿಸಿದ್ದಾರೆ.
ಕಾಂಗ್ರೆಸ್ ನಾಯಕರ ಒತ್ತಾಯದ ಮೇರೆಗೆ ನಾನು ರಾಜಿನಾಮೆ ವಾಪಸ್ ಪಡೆಯುತ್ತಿದ್ದೇನೆ, ವಿಶ್ವಾಸ ಮತಕ್ಕೆ ನಾನು ಬೆಂಬಲ ಸೂಚಿಸುತ್ತೇನೆ ಎಂಬ ಹೇಳಿಕೆ ನೀಡಿರುವ ಬೆನ್ನಲ್ಲೇ ಈ ವಿಡಿಯೋ ಬಿಡುಗಡೆ ಮಾಡಿದ್ದಾರೆ.
ವಿಡಿಯೋದಲ್ಲಿ ಮಾತನಾಡಿರುವ ಶಾಸಕ ಎಸ್,ಟಿ ಸೋಮಶೇಖರ್, ನಾನು, ರಾಮಲಿಂಗಾ ರೆಡ್ಡಿ, ಬೈರತಿ ಬಸವರಾಜ್ ಹಾಗೂ ಮುನಿರತ್ನ ಒಟ್ಟಾಗಿ ಕೂತು ಚರ್ಚಿಸಿ ರಾಜಿನಾಮೆ ನಿರ್ಧಾರ ಕೈಗೊಂಡಿದ್ದೇವು, ಯಾವುದೇ ಕಾರಣಕ್ಕೂ ರಾಜಿನಾಮೆ ವಾಪಸ್ ಪಡೆಯಬಾರದೆಂದು ನಾಲ್ವರು ನಿರ್ಧರಿಸಿದ್ದೆವು, ಆದರೆ ರಾಮಲಿಂಗಾರೆಡ್ಡಿ ರಾಜಿನಾಮೆ ವಾಪಸ್ ಪಡೆಯುವುದಾಗಿ ಹೇಳಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇವೆ, ಆದರೆ ನಾವು ಯಾವುದೇ ಕಾರಣಕ್ಕೂ ಅವರನ್ನು ಅನುಸರಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


