ಬಹುಮತವಿಲ್ಲದಿದ್ದರೂ ಸರ್ಕಾರದಿಂದ ಕಾಲಹರಣ: ಬಿಎಸ್ ಯಡಿಯೂರಪ್ಪ
ಒಬ್ಬೊಬ್ಬ ಶಾಸಕರಿಗೆ ಮಾತನಾಡಲು ಕಾಲಾವಕಾಶ ನೀಡುವ ಮೂಲಕ ಸದನದಲ್ಲಿ ಕಾಲಹರಣ ಮಾಡಲಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.

Published On :
ಬೆಂಗಳೂರು: ಒಬ್ಬೊಬ್ಬ ಶಾಸಕರಿಗೆ ಮಾತನಾಡಲು ಕಾಲಾವಕಾಶ ನೀಡುವ ಮೂಲಕ ಸದನದಲ್ಲಿ ಕಾಲಹರಣ ಮಾಡಲಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
ವಿಧಾನಸಭೆಯ ಕಲಾಪವನ್ನು ಸ್ಪೀಕರ್ ಅವರು ಸೋಮವಾರಕ್ಕೆ ಮುಂದೂಡಿದ ಬಳಿಕ ಬಿಜೆಪಿ ಶಾಸಕರೊಂದಿಗೆ ಸಭೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ ಬಹುಮತ ಇಲ್ಲದಿದ್ದರೂ ಕಾಲಹರಣ ಮಾಡಲಾಗಿದೆ. ಆದಷ್ಟು ಬೇಗ ವಿಶ್ವಾಸಮತ ನಿರ್ಣಯವನ್ನು ಮತಕ್ಕೆ ಹಾಕುವಂತೆ ಸ್ಪೀಕರ್‌ಗೂ ಪತ್ರ ಬರೆದಿದ್ದೇವೆ, ರಾಜ್ಯಪಾಲರಿಗೂ ಪತ್ರ ಬರೆದು ತಿಳಿಸಿದ್ದೇವೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳಿದರು.
ರಾಜ್ಯಪಾಲರು ಏನು ಮಾಡಬಹುದು ಅದನ್ನು ಮಾಡಿದ್ದಾರೆ. ಹೀಗಾಗಿ ಅವರು ಕೇಂದ್ರಕ್ಕೆ ವರದಿ ಕಳುಹಿಸಿದ್ದು, ಮುಂದಿನ ನಿರ್ಧಾರ ಅವರಿಗೆ ಬಿಟ್ಟಿದ್ದು. ಮತ್ತೆ ನಾವು ರಾಜ್ಯಪಾಲರ ಭೇಟಿ ಮಾಡುವುದಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ವಿಧಾನಸಭೆBS Yeddyurappaassembly sessionRamesh Kumarಬಿಎಸ್ ಯಡಿಯೂರಪ್ಪರಾಜ್ಯ ರಾಜಕೀಯKarnataka politicsಸ್ಪೀಕರ್ ರಮೇಶ್ ಕುಮಾರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


