ರಾಜಕೀಯ

ಶಾಸಕ ಶ್ರೀನಿವಾಸ ಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ: ಎಸ್.ಆರ್ ವಿಶ್ವನಾಥ್

ಬಿಜೆಪಿ ಕಡೆಯಿಂದ ತಮಗೆ 30 ಕೋಟಿ ರು. ಹಣದ ಆಮಿಷ ಒಡ್ಡಲಾಗಿತ್ತು ಎಂಬ ಕೋಲಾರ ಶಾಸಕ ಶ್ರೀನಿವಾಸಗೌಡ ಅವರ ಆರೋಪ ವಿಧಾನಸಭೆಯಲ್ಲಿಂದು ತೀವ್ರ ...

ಶಾಸಕ ಶ್ರೀನಿವಾಸ ಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ: ಎಸ್.ಆರ್ ವಿಶ್ವನಾಥ್
ಶಾಸಕ ಶ್ರೀನಿವಾಸ ಗೌಡ
Published On :
ಬೆಂಗಳೂರು: ಬಿಜೆಪಿ ಕಡೆಯಿಂದ ತಮಗೆ  30 ಕೋಟಿ ರು. ಹಣದ ಆಮಿಷ ಒಡ್ಡಲಾಗಿತ್ತು ಎಂಬ ಕೋಲಾರ ಶಾಸಕ ಶ್ರೀನಿವಾಸಗೌಡ ಅವರ ಆರೋಪ ವಿಧಾನಸಭೆಯಲ್ಲಿಂದು ತೀವ್ರ ಕೋಲಾಹಲಕ್ಕೆ ಕಾರಣವಾಯಿತು.
ವಿಶ್ವಾಸಮತ ಯಾಚನೆಗೂ ಮುನ್ನ ನಡೆದ ಚರ್ಚೆಯ ವೇಳೆ ಮಾತನಾಡಿದ ಶ್ರೀನಿವಾಸಗೌಡ, ತಾವು ಶಾಸಕತ್ವಕ್ಕೆ ರಾಜಿನಾಮೆ ನೀಡಲು ಬಿಜೆಪಿ ಕಡೆಯಿಂದ ಹಣದ ಆಮಿಷ ಒಡ್ಡಲಾಗಿತ್ತು. ಯಲಹಂಕ ಶಾಸಕ ವಿಶ್ವನಾಥ್‍ ಮತ್ತು ಸಿ.ಪಿ.ಯೋಗೀಶ್ವರ್ ತಮ್ಮ ಮನೆಗೆ ಐದು ಕೋಟಿ ರೂ.ನೊಂದಿಗೆ ಬಂದಿದ್ದರು. ಆದರೆ ಇದನ್ನು ತಿರಸ್ಕರಿಸಿ ವಾಪಸ್‍ ಕಳುಹಿಸಿದ್ದೇನೆ ಎಂದು ಹೇಳುತ್ತಿದ್ದಂತೆ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. 
ಈ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್, ವಿನಾ ಕಾರಣ ತಮ್ಮ ವಿರುದ್ದ ಆರೋಪ ಮಾಡುತ್ತಿರುವ ಜೆಡಿಎಸ್ ಶಾಸಕ ಶ್ರೀನಿವಾಸ ಗೌಡ, ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಚಿಂತನೆ ನಡೆಸುತ್ತಿರುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.