ಸೋಮವಾರ ಕ್ಲೈಮ್ಯಾಕ್ಸ್, ಅಂದೇ ಎಲ್ಲದಕ್ಕೂ ಉತ್ತರ ಸಿಗಲಿದೆ: ದಿನೇಶ್ ಗುಂಡೂರಾವ್
ಸೋಮವಾರ ವಿಶ್ವಾಸಮತ ನಿರ್ಣಯದ ಮೇಲಿನ ಚರ್ಚೆ ಅಂತ್ಯವಾಗಲಿದೆ. ಅಂದು ಬಹುಮತ ಯಾರಿಗೆ ಇದೆ ಎನ್ನುವುದು ಸಾಬೀತಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Published On :
ಬೆಂಗಳೂರು: ಸೋಮವಾರ ವಿಶ್ವಾಸಮತ ನಿರ್ಣಯದ ಮೇಲಿನ ಚರ್ಚೆ ಅಂತ್ಯವಾಗಲಿದೆ. ಅಂದು ಬಹುಮತ ಯಾರಿಗೆ ಇದೆ ಎನ್ನುವುದು ಸಾಬೀತಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಶನಿವಾರ ಕಾಂಗ್ರೆಸ್ ಶಾಸಕರು ತಂಗಿರುವ ತಾಜ್ ವಿವಾಂತ ಹೋಟಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ದೇಶಪೂರ್ವಕವಾಗಿ ನಾವು ವಿಶ್ವಾಸಮತ ನಿರ್ಣಯವನ್ನು ಮತಕ್ಕೆ ಹಾಕುವುದನ್ನು ವಿಳಂಬ ಮಾಡಿಲ್ಲ. ಸಂಸದೀಯ ನಡವಳಿಕೆಯಲ್ಲಿ ಕೆಲವು ಗೊಂದಲಗಳಿದ್ದು, ಅವುಗಳನ್ನು ಬಗೆಹರಿಸಿಕೊಳ್ಳುವುದು ನಮ್ಮ ಹಕ್ಕು. ಸೋಮವಾರ ಎಲ್ಲದಕ್ಕೂ ಉತ್ತರ ಸಿಗಲಿದೆ ಎಂದು ಸ್ಪಷ್ಟಪಡಿಸಿದರು.
ವಿಪ್ ಸಂಬಂಧ ಸುಪ್ರೀಂಕೋರ್ಟ್‌ನ ತೀರ್ಪಿನಲ್ಲಿ ಗೊಂದಲ ಉಂಟಾಗಿತ್ತು. ಇದೇ ವೇಳೆ ರಾಜ್ಯಪಾಲರ ಆದೇಶವೂ ಚರ್ಚಾಸ್ಪದವಾಗಿತ್ತು. ಈ ಎರಡೂ ವಿಚಾರಗಳ ಬಗ್ಗೆ ಸ್ಪಷ್ಟೀಕರಣ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಇದರ ವಿಚಾರಣೆಯ ಬಳಿಕ ಸ್ಪಷ್ಟತೆ ಸಿಗಲಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
PoliticsರಾಜಕೀಯDinesh Gundu Raoದಿನೇಶ್ ಗುಂಡೂರಾವ್trust votemondayಸೋಮವಾರಕೆಪಿಸಿಸಿ ಅಧ್ಯಕ್ಷವಿಶ್ವಾಸ ಮತKPCC Chief
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


