'ಅಧಿಕಾರಕ್ಕೆ ಅಂಟಿ ಕುಳಿತಿಲ್ಲ ಎಂದು ಹೇಳುತ್ತಿರುವ ಎಚ್ ಡಿಕೆ, ಸಿಎಂ ಕುರ್ಚಿಗೆ ಗೂಟ ಹೊಡೆದುಕೊಂಡು ಕೂತಿದ್ದಾರೆ'
ನಾವು ಅಧಿಕಾರಕ್ಕೆ ಅಂಟಿಕೊಂಡಿಲ್ಲ ಎಂದು ಮುಖ್ಯಮಂತ್ರಿ ಅಧಿವೇಶನದಲ್ಲಿ ಹೇಳುತ್ತಾರೆ, ಆದರೆ ಅವರು ವಿಶ್ವಾಸಮತ ಯಾಚನೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ...

Published On :
ಬೆಂಗಳೂರು: ನಾವು ಅಧಿಕಾರಕ್ಕೆ ಅಂಟಿಕೊಂಡಿಲ್ಲ ಎಂದು ಮುಖ್ಯಮಂತ್ರಿ ಅಧಿವೇಶನದಲ್ಲಿ ಹೇಳುತ್ತಾರೆ, ಆದರೆ ಅವರು ವಿಶ್ವಾಸಮತ ಯಾಚನೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಟೀಕಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ನಿರ್ಣಯದ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಲಾಗಿದೆ. ಸ್ಪೀಕರ್, ಮುಖ್ಯಮಂತ್ರಿ ಹಾಗೂ ಸಿದ್ದರಾಮಯ್ಯ ಅವರು ಇದಕ್ಕೆ ಒಪ್ಪಿದ್ದಾರೆ. ಆದರೆ ಒಂದು ವೇಳೆ ನಾಳೆ ಚರ್ಚೆ ಮುಂದೂಡಿದರೆ ಅವರೆಲ್ಲರೂ ವಚನಭ್ರಷ್ಟರಾಗುತ್ತಾರೆ. ನಮ್ಮನ್ನು ಪ್ರಚೋದಿಸುವುದೇ ಮೈತ್ರಿ ಸರ್ಕಾರದ ಉದ್ದೇಶ. ಆದರೆ ನಾವು ಶಿಸ್ತಿನಿಂದ ನಡೆದುಕೊಳ್ಳುತ್ತಿದ್ದೇವೆ ಎಂದು ಹೇಳಿದರು.
ಅಧಿಕಾರಕ್ಕೆ ಅಂಟಿ ಕುಳಿತಿಲ್ಲ. ನಮ್ಮ ಕುಟುಂಬಕ್ಕೆ ಅಧಿಕಾರದ ಆಸೆ ಇಲ್ಲ ಎಂದು ಹೇಳುತ್ತಿರುವ ಮುಖ್ಯಮಂತ್ರಿ, ಇನ್ನೂ ಗೂಟ ಹಾಕಿಕೊಂಡು ಅಧಿಕಾರದಲ್ಲೇ ಮುಂದುವರಿಯುತ್ತಿದ್ದಾರೆ. ಅವರಿಗೆ ನೈತಿಕತೆ ಇದ್ದರೆ ರಾಜೀನಾಮೆ ನೀಡಬೇಕಿತ್ತು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


