ಬಿಜೆಪಿ ತೀವ್ರ ಆತುರದಲ್ಲಿದೆ, ಎಲ್ಲವೂ ಸೋಮವಾರ ಕೊನೆಗೊಳ್ಳಲಿದೆ- ಡಿಕೆ ಶಿವಕುಮಾರ್
ವಿಶ್ವಾಸಮತ ನಿರ್ಣಯ ಮತ ಹಾಕುವ ವಿಚಾರದಲ್ಲಿ ಆಡಳಿತಾರೂಢ ಮೈತ್ರಿ ಸರ್ಕಾರದ ನಾಯಕರು ಹಾಗೂ ಬಿಜೆಪಿ ನಡುವಣ ವಾಕ್ ಸಮರ ನಡೆಯುತ್ತಿದೆ.

Published On :
ಬೆಂಗಳೂರು: ವಿಶ್ವಾಸಮತ ನಿರ್ಣಯ ಮತ ಹಾಕುವ ವಿಚಾರದಲ್ಲಿ ಆಡಳಿತಾರೂಢ ಮೈತ್ರಿ ಸರ್ಕಾರದ ನಾಯಕರು ಹಾಗೂ ಬಿಜೆಪಿ ನಡುವಣ ವಾಕ್ ಸಮರ ನಡೆಯುತ್ತಿದೆ.
ವಿಶ್ವಾಸಮತ ನಿರ್ಣಯವನ್ನು ಮತಕ್ಕೆ ಹಾಕುವ ಮುನ್ನ ಸಮಗ್ರ ಚರ್ಚೆ ನಡೆಯಬೇಕೆಂಬುದು ಕಾಂಗ್ರೆಸ್ ಬೇಡಿಕೆಯಾದರೆ, ಪ್ರಕ್ರಿಯೆಯನ್ನು ವಿನಾಕಾರಣ ವಿಳಂಬ ಮಾಡಲಾಗುತ್ತಿದೆ ಎಂಬುದು ಬಿಜೆಪಿಯ ಆರೋಪವಾಗಿದೆ. ಈ ಎಲ್ಲವೂ ಸೋಮವಾರ ಅಂತ್ಯಗೊಳ್ಳಲಿದೆ ಎಂದು ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.
ರಾಜ್ಯದಲ್ಲಿನ ಪ್ರಸ್ತುತ ರಾಜಕೀಯ ಅಸ್ಥಿರತೆಗೆ ಬಿಜೆಪಿ ಹೊಣೆ. ನಮ್ಮ ಶಾಸಕರನ್ನು ಗನ್ ಪಾಯಿಂಟ್ ನಲ್ಲಿ ಇಟ್ಟಿದ್ದಾರೆ. ಯಾವುದೇ ಚರ್ಚೆ ಇಲ್ಲದೆ ಇಡೀ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಾ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಸಂದರ್ಶನದಲ್ಲಿ ಅವರು ಪ್ರಶ್ನಿಸಿದರು.
ವಿನಾಕಾರಣ ಚರ್ಚೆಯನ್ನು ಎಳೆಯುತ್ತಿಲ್ಲ. ಪ್ರಕ್ರಿಯೆಯನ್ನು ವಿಳಂಬ ಮಾಡಲು ನಾವು ಪ್ರಯತ್ನಿಸುತ್ತಿಲ್ಲ. ನೆಮ್ಮೆಲ್ಲಾ ಆರೋಪಗಳಿಗೆ ಉತ್ತರಿಸಲಾಗುತ್ತಿದೆ. ಬಿಜೆಪಿಯವರು ತೀವ್ರ ಆತುರದಲ್ಲಿದ್ದಾರೆ. ವಿಶ್ವಾಸಮತ ಸೋಲಿಸುವಷ್ಟ ಸಂಖ್ಯೆ ಹೊಂದಿದ್ದರೆ ಅವರು ಯಾಕೆ ಈ ರೀತಿಯ ಆತುರ ಪಡುತ್ತಾರೆ ಎಂದು ಪ್ರಶ್ನಿಸಿದರು.
ಬಹುಮತ ಸಾಬೀತುಪಡಿಸುತ್ತೇವೆ ಎಂಬ ವಿಶ್ವಾಸವಿದೆ. ಮುಂಬೈನಲ್ಲಿರುವ ಶಾಸಕರಿಗೆ ಪೋನ್ ನಲ್ಲಿ ಮಾತನಾಡುವುದಕ್ಕೂ ಅವಕಾಶ ನೀಡುತ್ತಿಲ್ಲ. ಅಲ್ಲಿರುವ ಕೆಲ ಶಾಸಕರನ್ನು ಲೊನಾವಾಲಕ್ಕೆ ಸ್ಛಳಾಂತರ ಮಾಡಲಾಗಿದೆ. ಅವರು ಬೆಂಗಳೂರಿಗೆ ಬರುತ್ತಾರೆ ಎಂಬ ವಿಶ್ವಾಸವಿದೆ ಕಾದುನೋಡೋಣ ಎಂದರು.
ಕಾಂಗ್ರೆಸ್ ಬಂಡಾಯ ಶಾಸಕರನ್ನು ಬಿಜೆಪಿಯವರೇ ಮುಂಬೈಗೆ ಕಳುಹಿಸಿರುವ ಬಗ್ಗೆ ನಮ್ಮಲ್ಲಿ ಸೂಕ್ತ ದಾಖಲೆಗಳಿವೆ. ಪೋಟೋಗಳು, ಪ್ರಯಾಣದ ವೆಚ್ಚದ ಮಾಹಿತಿ ಎಲ್ಲವೂ ನಮ್ಮ ಬಳಿ ಇದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ. ಈ ಎಲ್ಲಾ ಅಸ್ಥಿರತೆಗೆ ಬಿಜೆಪಿಯೇ ನೇರ ಕಾರಣ ಬಿಜೆಪಿ ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


