ನಾವು ವಾಪಾಸ್ ಬರುವ ಪ್ರಶ್ನೆಯೇ ಇಲ್ಲ- ಅತೃಪ್ತ ಶಾಸಕರು
ನಾವು ಬೆಂಗಳೂರಿಗೆ ವಾಪಾಸ್ ಬರುವ ಪ್ರಶ್ನೆಯೇ ಇಲ್ಲ ಎಂದು ಬಂಡಾಯ ಶಾಸಕರು ತಿಳಿಸಿದ್ದಾರೆ.13 ಶಾಸಕರು ಒಟ್ಟಾಗಿದ್ದು, ನಮ್ಮಲ್ಲಿ ಯಾವುದೇ ಬಿರುಕು ಆಗಿಲ್ಲ ಎಂದು ಅವರು ಹೇಳಿದ್ದಾರೆ.

Published On :
ಬೆಂಗಳೂರು: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಶ್ವಾಸಮತಯಾಚನೆಗೆ ನಾಳೆ ಅಂತಿಮ ಗಡುವನ್ನು ಮೈತ್ರಿ ನಾಯಕರು ತೆಗೆದುಕೊಂಡಿರುವಂತೆ ಮುಂಬೈನಲ್ಲಿರುವ ಕಾಂಗ್ರೆಸ್ ಬಂಡಾಯ ಶಾಸಕರನ್ನು ಮನವೊಲಿಸುವ ಪ್ರಯತ್ನಗಳು ನಡೆಯುತ್ತವೆ. ಆದರೆ, ನಾವು ಬೆಂಗಳೂರಿಗೆ ವಾಪಾಸ್ ಬರುವ ಪ್ರಶ್ನೆಯೇ ಇಲ್ಲ ಎಂದು ಬಂಡಾಯ ಶಾಸಕರು ತಿಳಿಸಿದ್ದಾರೆ.
ಮುಂಬೈಯಲ್ಲಿರುವ 13 ಶಾಸಕರು ಒಟ್ಟಾಗಿದ್ದು, ನಮ್ಮಲ್ಲಿ ಯಾವುದೇ ಬಿರುಕು ಆಗಿಲ್ಲ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇವೆ ಅದನ್ನು ಸ್ಪೀಕರ್ ಅಂಗೀಕರಿಸಬೇಕು, ಅಲ್ಲಿಯವರೆಗೂ ನಾವುಗಳು ಯಾರು ಕೂಡಾ ಬೆಂಗಳೂರಿಗೆ ವಾಪಾಸ್ ಆಗುವುದಿಲ್ಲ ಎಂದು ಬಂಡಾಯ ಶಾಸಕರಲ್ಲಿ ಒಬ್ಬರಾದ ಎಚ್. ವಿಶ್ವನಾಥ್ ಹಾಗೂ ಎಂಟಿಬಿ ನಾಗರಾಜ್ ಪ್ರತಿಕ್ರಿಯಿಸಿದ್ದಾರೆ.
ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್ ಯಾರೇ ಸಿಎಂ ಆಗಲೀ ನಾವು ಮಾತ್ರ ಬೆಂಗಳೂರಿಗೆ ವಾಪಾಸ್ ಆಗಲ್ಲ, ವಿಶ್ವಾಸಮತಯಾಚನೆ ಪ್ರಕ್ರಿಯೆಯಲ್ಲೂ ಪಾಲ್ಗೊಳ್ಳುವುದಿಲ್ಲ. ಉಳಿದಿರುವ ಶಾಸಕರನ್ನು ಉಳಿಸಿಕೊಳ್ಳಲು ಇಂತಹ ಹೇಳಿಕೆ ನೀಡಲಾಗುತ್ತಿದೆ. ಸಿದ್ದರಾಮಯ್ಯ ತಮ್ಮನ್ನು ಸಂಪರ್ಕಿಸಿಲ್ಲ, ಅವರ ಜೊತೆಗೆ ಮಾತನಾಡುವುದು ಇಲ್ಲ ಎಂದು ಎಂಟಿಬಿ ನಾಗರಾಜ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ವಿಶ್ವಾಸಮತH. VishwanathKarnataka politicsMTB Nagarajಎಂಟಿಬಿ ನಾಗರಾಜ್ಹೆಚ್ ವಿಶ್ವನಾಥ್Trust Vote ರಾಜ್ಯ ರಾಜಕೀಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


