ಅತೃಪ್ತರಿಗೂ ಸೇರಿ ಕಾಂಗ್ರೆಸ್ ನ ಎಲ್ಲಾ ಶಾಸಕರಿಗೆ ವಿಪ್ ಜಾರಿಗೊಳಿಸಿದ ಸಿದ್ದರಾಮಯ್ಯ
ಇಂದು ನಡೆಯಲಿರುವ ವಿಧಾನಸಭೆಯ ಕಾರ್ಯ ಕಲಾಪಗಳಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಪಕ್ಷದ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿಪ್ ಜಾರಿಗೊಳಿಸಿದ್ದಾರೆ.

Published On :
ಬೆಂಗಳೂರು: ಇಂದು ನಡೆಯಲಿರುವ ವಿಧಾನಸಭೆಯ ಕಾರ್ಯ ಕಲಾಪಗಳಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಪಕ್ಷದ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿಪ್ ಜಾರಿಗೊಳಿಸಿದ್ದಾರೆ.
ವಿಧಾನಸಭೆಯ ಕಾರ್ಯಕಲಾಪಗಳಲ್ಲಿ ಮೈತ್ರಿ ಸರ್ಕಾರದ ವಿಶ್ವಾಸಮತ ನಿರ್ಣಯದ ಮೇಲಿನ ಚರ್ಚೆ ನಡೆಯುತ್ತಿದ್ದು, ನಿರ್ಣಯವನ್ನು ಮತಕ್ಕೆ ಹಾಕಲಾಗುತ್ತದೆ. ಆದ್ದರಿಂದ ಕಾಂಗ್ರೆಸ್ ಪಕ್ಷದಿಂದ ಚುನಾಯಿತರಾದ ಎಲ್ಲಾ ಶಾಸಕರು ಇಂದಿನ ಕಾರ್ಯಕಲಾಪಗಳಲ್ಲಿ ಕಡ್ಡಾಯವಾಗಿ ಹಾಜರಾಗಬೇಕು ಎಂದು ವಿಪ್ ನಲ್ಲಿ ಉಲ್ಲೇಖಿಸಲಾಗಿದೆ..
ಶಾಸಕಾಂಗ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನಲ್ಲಿರುವ ಕಾಂಗ್ರೆಸ್ ಪಕ್ಷದ ಬಂಡಾಯ ಶಾಸಕರಿಗೂ ವಿಪ್ ಜಾರಿಗೊಳಿಸಲಾಗಿದೆ. ಕಡ್ಡಾಯವಾಗಿ ಸದನದಲ್ಲಿ ಹಾಜರಾಗುವ ಮೂಲಕ ಮೈತ್ರಿ ಸರ್ಕಾರದ ಪರವಾಗಿ ಬೆಂಬಲ ಸೂಚಿಸುವಂತೆ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


