ರಾಜಕೀಯ

ವಿಶ್ವಾಸಮತ ಹಿನ್ನೆಲೆ: ವಿಧಾನಸೌಧ ಸುತ್ತಮುತ್ತ ಬಿಗಿ ಬಂದೋಬಸ್ತ್

ರಾಜ್ಯ ಸಮ್ಮಿಶ್ರ ಸರ್ಕಾರದ ಪರವಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ವಿಶ್ವಾಸಮತಯಾಚಿಸಲಿರುವ ಹಿನ್ನೆಲೆಯಲ್ಲಿ ಶಕ್ತಿ ಕೇಂದ್ರ ವಿಧಾನಸೌಧ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ

ವಿಶ್ವಾಸಮತ ಹಿನ್ನೆಲೆ: ವಿಧಾನಸೌಧ ಸುತ್ತಮುತ್ತ ಬಿಗಿ ಬಂದೋಬಸ್ತ್
ವಿಧಾನಸೌಧ
Published On :
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಪರವಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ವಿಶ್ವಾಸಮತಯಾಚಿಸಲಿರುವ ಹಿನ್ನೆಲೆಯಲ್ಲಿ ಶಕ್ತಿ ಕೇಂದ್ರ ವಿಧಾನಸೌಧ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ವಿಧಾನಸೌಧ ಹಾಗೂ ರಾಜಭವನ ರಸ್ತೆಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ವಿಶ್ವಾಸಮತ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಶಾಸಕಾಂಗ ಪಕ್ಷದ ಸಭೆ ನಡೆಸಿದ್ದು, ವಿಧಾನಸಭೆಯ ಕಾರ್ಯಕಲಾಪಗಳಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ವಿಪ್ ಜಾರಿಗೊಳಿಸಿದ್ದಾರೆ.
ಬಿಜೆಪಿ ಪ್ರಜಾಪ್ರಭುತ್ವದ ಪಾವಿತ್ರತೆಯನ್ನು ಹಾಳು ಮಾಡಲು ಹೊರಟಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಬೆಂಗಳೂರಿಗೆ ವಾಪಾಸ್ ಆಗಿ ಸದನದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.
ಸ್ಪೀಕರ್ ರಮೇಶ್ ಕುಮಾರ್ ವಿಧಾನಸೌಧಕ್ಕೆ ಆಗಮಿಸಿದ್ದು, ವಿಶ್ವಾಸಮತ ನಿರ್ಣಯವನ್ನು ಮತಕ್ಕೆ ಹಾಕುವ ಕುರಿತು ಅವರು ತಾಳುವ ನಿಲುವು ತೀವ್ರ ಕುತೂಹಲ ಕೆರಳಿಸಿದೆ. ಮತ್ತೊಂದೆಡೆ ಸಮ್ಮಿಶ್ರ ಸರ್ಕಾರವನ್ನು ರಕ್ಷಿಸುವ ನಿಟ್ಟಿನಲ್ಲಿ ವಿಶ್ವಾಸಮತ ಯಾಚನೆ ಪ್ರಕ್ರಿಯೆಯನ್ನು ಎಳೆಯುವ ಮೂಲಕ ಸ್ಪೀಕರ್ ರಮೇಶ್ ಕುಮಾರ್ ಸಹಕಾರ ನೀಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.