ವಿಶ್ವಾಸಮತದಲ್ಲಿ ಕುಮಾರಸ್ವಾಮಿಗೆ ಸೋಲು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನ
ಸುದೀರ್ಘ ಚರ್ಚೆಯ ನಂತರ ಜು.23 ರಂದು ವಿಧಾನಸಭೆಯಲ್ಲಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿಶ್ವಾಸಮತಯಾಚನೆ ಮಾಡಿದ್ದು, ಫಲಿತಾಂಶದಲ್ಲಿ ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿದೆ.

Published On :
ಬೆಂಗಳೂರು: ಸುದೀರ್ಘ ಚರ್ಚೆಯ ನಂತರ ಜು.23 ರಂದು ವಿಧಾನಸಭೆಯಲ್ಲಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿಶ್ವಾಸಮತಯಾಚನೆ ಮಾಡಿದ್ದು, ಫಲಿತಾಂಶದಲ್ಲಿ ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿದೆ.
ಸುದೀರ್ಘ ಚರ್ಚೆಯ ನಂತರ ಜು.23 ರಂದು ವಿಧಾನಸಭೆಯಲ್ಲಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿಶ್ವಾಸಮತಯಾಚನೆ ಮಾಡಿದ್ದು, ಫಲಿತಾಂಶದಲ್ಲಿ ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿದೆ. ಸಿಎಂ ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ.
ವಿಶ್ವಾಸಮತ ನಿರ್ಣಯದ ಪರವಾಗಿ 99 ಮತಗಳು, ವಿರುದ್ಧವಾಗಿ 105 ಮತಗಳು ದೊರೆಯಿತು. ಸದನದಲ್ಲಿ ಸ್ಪೀಕರ್ ಹೊರತುಪಡಿಸಿ ಒಟ್ಟು 204 ಮಂದಿ ಸದಸ್ಯರು ಹಾಜರಿದ್ದರು. ಈ ಮೂಲಕ ಕಳೆದ ಮೂರು ವಾರಗಳಿಂದ ನಡೆಯುತ್ತಿದ್ದ ಶಾಸಕರ ರಾಜೀನಾಮೆ, ಆಪರೇಷನ್ ಕಮಲ ಕಾರ್ಯಾಚರಣೆ, ರಾಜಕೀಯ ಅನಿಶ್ಚಿತತೆಗೆ ತೆರೆ ಬಿದ್ದಿದ್ದು, ಕುಮಾರಸ್ವಾಮಿ ನೇತೃತ್ವದ 14 ತಿಂಗಳ ಮೈತ್ರಿ ಸರ್ಕಾರ ಪತನಗೊಂಡಿದೆ.
ವಿಧಾನಸಭೆಯಲ್ಲಿ ಕಳೆದ ಗುರುವಾರ ಕುಮಾರಸ್ವಾಮಿ ಮಂಡಿಸಿದ್ದ ವಿಶ್ವಾಸಮತ ನಿರ್ಣಯದ ಮೇಲೆ ನಾಲ್ಕು ದಿನಗಳ ಕಾಲ ನಡೆದ ಸುದೀರ್ಘ ಚರ್ಚೆಗೆ ಉತ್ತರ ನೀಡಿದ ಕುಮಾರಸ್ವಾಮಿ, ಬಳಿಕ ವಿಶ್ವಾಸ ನಿರ್ಣಯವನ್ನು ಮತಕ್ಕೆ ಹಾಕುವಂತೆ ಕೋರಿದರು. ಧ್ವನಿಮತದ ನಂತರ ಪ್ರತಿಪಕ್ಷ ನಾಯಕ ಯಡಿಯೂರಪ್ಪ ಮತ ವಿಭಜನೆಗೆ ಒತ್ತಾಯಿಸಿದರು. ಬಳಿಕ ಕೋರಂ ಬೆಲ್ ಹೊಡೆದ ನಂತರ ಪರ ವಿರುದ್ಧ ಶಾಸಕರ ತಲೆ ಎಣಿಕೆ ನಡೆಯಿತು.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾ ರೆಡ್ಡಿ, ಕಾಂಗ್ರೆಸ್ ನಾಯಕರ ವಿರುದ್ಧ ಮುನಿಸಿಕೊಂಡಿದ್ದ ಅವರ ಪುತ್ರಿ ಸೌಮ್ಯ ರೆಡ್ಡಿ, ಉಪ ಸಭಾಧ್ಯಕ್ಷ ಎಂ. ಕೃಷ್ಣಾ ರೆಡ್ಡಿ ಸಹ ಮೈತ್ರಿ ಸರ್ಕಾರದ ಪರವಾಗಿ ಮತ ಚಲಾಯಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ರಚನೆಗೆ ಇದೀಗ ಹಾದಿ ಸುಗಮವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnatakaಕರ್ನಾಟಕHD Kumaraswamyಕಾಂಗ್ರೆಸ್-ಜೆಡಿಎಸ್ಹೆಚ್ ಡಿ ಕುಮಾರಸ್ವಾಮಿfloor testCongress-JD(S)ವಿಶ್ವಾಸಮತಯಾಚನೆಮೈತ್ರಿ ಸರ್ಕಾರ ಪತನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


