ಡಿಕೆ ಶಿವಕುಮಾರ್ ಸದನವನ್ನು ಹಾದಿ ತಪ್ಪಿಸುತ್ತಿದ್ದಾರೆ- ಶೆಟ್ಟರ್ ಆರೋಪ
ಡಿಕೆ ಶಿವಕುಮಾರ್ ಸದನವನ್ನು ಹಾದಿ ತಪ್ಪಿಸುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.

Published On :
ಬೆಂಗಳೂರು: ಇಂದು ಸಂಜೆ 6 ಗಂಟೆಗೆ ವಿಶ್ವಾಸಮತಯಾಚಿಸುವಂತೆ ರಾಜ್ಯದ ಮೈತ್ರಿ ಸರ್ಕಾರಕ್ಕೆ ಸ್ಪೀಕರ್ ರಮೇಶ್ ಕುಮಾರ್ ಗಡುವು ನೀಡಿರುವಂತೆ ಇಂದು ಸಹ ವಿಧಾನಸಭೆಯಲ್ಲಿ ತೀವ್ರ ರಾಜಕೀಯ ಹೈಡ್ರಾಮ ನಡೆಯುತ್ತಿದೆ.
ಮೂರನೇ ದಿನವೂ ವಿಶ್ವಾಸಮತ ನಿರ್ಣಯ ಮೇಲಿನ ಚರ್ಚೆ ಮುಂದುವರೆದಿದ್ದು, ಆಡಳಿತಾ ಹಾಗೂ ಪ್ರತಿಪಕ್ಷಗಳ ನಾಯಕರ ನಡುವೆ ವಾಕ್ ಸಮರ ನಡೆಯುತ್ತಿದೆ.
ಚರ್ಚೆಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ಶಾಸಕರ ರಾಜಕೀಯ ಭವಿಷ್ಯವನ್ನು ಬಿಜೆಪಿ ಹಾಳು ಮಾಡುತ್ತಿದೆ ಎಂದು ಆರೋಪಿಸಿದರು. ಇದಕ್ಕೆ ಪ್ರತಿ ಆರೋಪ ಮಾಡಿದ ಬಿಜೆಪಿ ಹಿರಿಯ ಮುಖಂಡ ಜಗದೀಶ್ ಶೆಟ್ಟರ್, ಡಿಕೆ ಶಿವಕುಮಾರ್ ಸದನವನ್ನು ಹಾದಿ ತಪ್ಪಿಸುತ್ತಿದ್ದಾರೆ ಎಂದರು.
ಬಂಡಾಯ ಶಾಸಕರು ಈಗಲೂ ಕೂಡಾ ಸದನದ ಸದಸ್ಯರಾಗಿದ್ದರೂ ಡಿಕೆ ಶಿವಕುಮಾರ್ ಅವರನ್ನು ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ.ರೆಬೆಲ್ ಶಾಸಕರು ಸದನದಲ್ಲಿ ಭಾಗವಹಿಸಬಹುದು ಅಥವಾ ಗೈರಾಗಬಹುದು. ಅದು ಅವರ ವಿವೇಚನೆಗೆ ಬಿಟ್ಟ ವಿಚಾರವಾಗಿದ್ದು, ಯಾರೂ ಕೂಡಾ ಬಲವಂತಪಡಿಸಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದಾಗ್ಯೂ, ಮುಂಬೈನಲ್ಲಿರುವ ಬಂಡಾಯ ಶಾಸಕರನ್ನು ಮನಸನ್ನು ಬದಲಾಯಿಸಲು ಡಿಕೆ ಶಿವಕುಮಾರ್ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಶೆಟ್ಟರ್ ಆರೋಪಿಸಿದರು.
ಶಾಸಕರ ಅನರ್ಹತೆ ಮತ್ತಿತರ ವಿಚಾರ ಕುರಿತಂತೆ ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಬೇಕಾಗಿದೆ. ಆದಾಗ್ಯೂ, ಡಿಕೆ ಶಿವಕುಮಾರ್ ಸುಪ್ರೀಂಕೋರ್ಟ್ ಆದೇಶವನ್ನು ಉಲ್ಲಂಘಿಸುತ್ತಿದ್ದಾರೆ ಎಂದು ಶೆಟ್ಟರ್ ಸದನದಲ್ಲಿ ಟೀಕಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Jagadish Shettarಜಗದೀಶ್ ಶೆಟ್ಟರ್ಡಿಕೆ ಶಿವಕುಮಾರ್Karnataka politicsDKShivakumarTrust vote Debate ರಾಜ್ಯ ರಾಜಕೀಯವಿಶ್ವಾಸಮತ ಮೇಲಿನ ಚರ್ಚೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


