ಬಿಎಸ್ಪಿ ಪಕ್ಷದಿಂದ ಶಾಸಕ ಎನ್. ಮಹೇಶ್ ಅಮಾನತು
ಮೈತ್ರಿ ಸರ್ಕಾರದ ಪರವಾಗಿ ಎಚ್ ಡಿ ಕುಮಾರಸ್ವಾಮಿ ಮಂಡಿಸಿದ ವಿಶ್ವಾಸಮತಯಾಚನೆ ವೇಳೆಯಲ್ಲಿ ಸದನದಿಂದ ದೂರ ಉಳಿದಿದ್ದ ಕೊಳ್ಳೇಗಾಲದ ಬಿಎಸ್ಪಿ ಪಕ್ಷದ ಎನ್. ಮಹೇಶ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

Published On :
ಬೆಂಗಳೂರು: ಮೈತ್ರಿ ಸರ್ಕಾರದ ಪರವಾಗಿ ಎಚ್ ಡಿ ಕುಮಾರಸ್ವಾಮಿ ಮಂಡಿಸಿದ ವಿಶ್ವಾಸಮತಯಾಚನೆ ವೇಳೆಯಲ್ಲಿ ಸದನದಿಂದ ದೂರ ಉಳಿದಿದ್ದ ಕೊಳ್ಳೇಗಾಲದ ಬಿಎಸ್ಪಿ ಪಕ್ಷದ ಎನ್. ಮಹೇಶ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.
ಪಕ್ಷದ ಆದೇಶ ಉಲ್ಲಂಘನೆ ಹಿನ್ನೆಲೆಯಲ್ಲಿ ಶಾಸಕ ಎನ್. ಮಹೇಶ್ ಅವರನ್ನು ಬಿಎಸ್ಪಿ ಪಕ್ಷದಿಂದ ಅಮಾನತುಪಡಿಸಿ ಪಕ್ಷದ ವರಿಷ್ಠೆ ಮಾಯಾವತಿ ಆದೇಶ ಹೊರಡಿಸಿದ್ದಾರೆ.
ಮೈತ್ರಿ ಸರ್ಕಾರದ ಪರವಾಗಿ ಪಾಲ್ಗೊಂಡು ಕುಮಾರಸ್ವಾಮಿ ಅವರನ್ನು ಬೆಂಬಲಿಸುವಂತೆ ಮಾಯಾವತಿ ಆದೇಶ ನೀಡಿದ್ದರು.ಆದರೆ, ಇಂದು ನಡೆದ ವಿಶ್ವಾಸಮತಯಾಚನೆ ವೇಳೆಯಲ್ಲಿ ಎನ್. ಮಹೇಶ್ ಗೈರಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ . ಈಬಗ್ಗೆ ಮಾಯಾವತಿ ಟ್ವೀಟ್ ಮಾಡಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


