ರಾಜಕೀಯ

ಬಿಜೆಪಿಗೆ ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ- ಕೆ. ಸಿ. ವೇಣುಗೋಪಾಲ್

ಸದ್ಯದ ರಾಜಕೀಯ ಅಸ್ಥಿರತೆಯಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ, ಸರ್ಕಾರ ರಚನೆ ಮಾಡುವಷ್ಟು ಬಿಜೆಪಿಗೂ ಬೆಂಬಲವಿಲ್ಲ ಎಂದು ಕೆಪಿಸಿಸಿ ಉಸ್ತುವಾರಿ ಕೆ. ಸಿ. ವೇಣುಗೋಪಾಲ್ ಹೇಳಿದ್ದಾರೆ.

ಬಿಜೆಪಿಗೆ ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ- ಕೆ. ಸಿ. ವೇಣುಗೋಪಾಲ್
ಕೆ. ಸಿ. ವೇಣುಗೋಪಾಲ್
Published On :
ಬೆಂಗಳೂರು: ಸದ್ಯದ ರಾಜಕೀಯ ಅಸ್ಥಿರತೆಯಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ, ಸರ್ಕಾರ ರಚನೆ ಮಾಡುವಷ್ಟು ಬಿಜೆಪಿಗೂ ಬೆಂಬಲವಿಲ್ಲ ಎಂದು ಕೆಪಿಸಿಸಿ ಉಸ್ತುವಾರಿ ಕೆ. ಸಿ. ವೇಣುಗೋಪಾಲ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ರಚನೆ ಮಾಡುವಷ್ಟು ಬಹುಮತ ಹೊಂದಿಲ್ಲ. ಅವರು ಬೇರೆ ಇನ್ನಾವುದಕ್ಕೂ ಕಾಯುವಂತಿದೆ ಎಂದರು.
ಬಿಜೆಪಿಗೆ ಇರುವುದು ಕೇವಲ 105 ಸದಸ್ಯರ ಬಲ ಮಾತ್ರ, ಜಾರಿ ನಿರ್ದೇಶನಾಲಯ, ಸಿಬಿಐ ಮೂಲಕ ಎಲ್ಲರನ್ನು ಹೆದರಿಸುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಹಣಬಲದಿಂದ ಅಧಿಕಾರ ಹಿಡಿಯಲು ವಾಮಮಾರ್ಗದಿಂದ ಪ್ರಯತ್ನಿಸುತ್ತಿದ್ದಾರೆ. ಆದರೆ, ಅವರ ಆಟ ಬಹಳ ದಿನಗಳ ನಡೆಯಲು ಸಾಧ್ಯವಿಲ್ಲ ಎಂದು ವೇಣುಗೋಪಾಲ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.