ರಾಜಕೀಯ

ವಿಶ್ವಾಸಮತದಲ್ಲಿ ಎಚ್ ಡಿಕೆ ಸೋಲು: ಪಕ್ಷೇತರರ ಅರ್ಜಿ ಹಿಂಪಡೆಯಲು 'ಸುಪ್ರೀಂ' ಅನುಮತಿ

ಎಚ್‌ಡಿ ಕುಮಾರಸ್ವಾಮಿ ಅವರು ಕರ್ನಾಟಕ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸಿ ಸೋಲುಂಡು ಅಧಿಕಾರದಿಂದ ಕೆಳಗಿಳಿದ ನಂತರ ರಾಜ್ಯದ ಇಬ್ಬರು ಪಕ್ಷೇತರ ಶಾಸಕರಿಗೆ....

ವಿಶ್ವಾಸಮತದಲ್ಲಿ ಎಚ್ ಡಿಕೆ ಸೋಲು: ಪಕ್ಷೇತರರ ಅರ್ಜಿ ಹಿಂಪಡೆಯಲು 'ಸುಪ್ರೀಂ' ಅನುಮತಿ
ಸುಪ್ರೀಂ ಕೋರ್ಟ್
Published On :
ನವದೆಹಲಿ: ಎಚ್‌ಡಿ ಕುಮಾರಸ್ವಾಮಿ ಅವರು ಕರ್ನಾಟಕ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸಿ ಸೋಲುಂಡು ಅಧಿಕಾರದಿಂದ ಕೆಳಗಿಳಿದ ನಂತರ ರಾಜ್ಯದ ಇಬ್ಬರು ಪಕ್ಷೇತರ ಶಾಸಕರಿಗೆ ತಮ್ಮ ಅರ್ಜಿಯನ್ನು ಹಿಂಪಡೆಯಲು ಸುಪ್ರೀಂ ಕೋರ್ಟ್ ಅವಕಾಶ ಕಲ್ಪಿಸಿದೆ.
ಪಕ್ಷೇತರರಾದ ಮುಳಬಾಗಿಲಿನ ಎಚ್. ನಾಗೇಶ್ ಹಾಗೂ ರಾಣಿಬೆನ್ನೂರಿನ ಆರ್. ಶಂಕರ್ ತಮ್ಮ ಅರ್ಜಿಯನ್ನು ಹಿಂಪಡೆಯಲು ಕೋರ್ಟ್ ಅನುಮತಿಸಿದೆ.
ಇದಕ್ಕೆ ಮುನ್ನ ವಾದ ಮಂಡಿಸಿದ ಸ್ಪೀಕರ್ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಪಕ್ಷೇತರರು ತಮ್ಮ ಅರ್ಜಿ ಹಿಂಪಡೆಯುವುದಾದರೆ ತಮ್ಮ ಅಭ್ಯಂತರವಿಲ್ಲ ಎಂದು ಕೋರ್ಟ್ ಗೆ ಹೇಳಿದ್ದರು.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರ ನೇತೃತ್ವದ ಪೀಠ ಅರ್ಜಿ ವಿಚಾರಣೆ ನಡೆಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.