ಬಿಎಸ್ ವೈ ಮುಖ್ಯಮಂತ್ರಿಯಾಗುತ್ತಿರುವುದು ನಮ್ಮ ಸೌಭಾಗ್ಯ: ಎಂಪಿ ರೇಣುಕಾಚಾರ್ಯ
ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ವಿಶ್ವಾಸಮತದಲ್ಲಿ ಸೋತಿತ್ತು, ನಾಲ್ಕು ದಿನಗಳ ನಂತರ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಸೂಚನೆಯಂತೆ ಬಿ.ಎಸ್ ಯಡಿಯೂರಪ್ಪ ..

Published On :
ಬೆಂಗಳೂರು: ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ವಿಶ್ವಾಸಮತದಲ್ಲಿ ಸೋತಿತ್ತು, ನಾಲ್ಕು ದಿನಗಳ ನಂತರ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಸೂಚನೆಯಂತೆ ಬಿ.ಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ, ಯಡಿಯೂರಪ್ಪ ಮುಖ್ಯಮಂತ್ರಿ ಆಗ್ತಿದ್ದಾರೆ. ಇದು ನಮ್ಮ ಸೌಭಾಗ್ಯ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.
ಬೆಂಗಳೂರಿನ ಬಿ.ಎಸ್.ವೈ ನಿವಾಸ ಡಾಲರ್ಸ್ ಕಾಲೋನಿಯ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡ್ತಿದ್ದಾರೆ ಇದು ನಾಡಿನ ಜನತೆಗೆ ಸಿಹಿ ಸುದ್ದಿಯಾಗಿದೆ. ಬಹುಮತ ಸಾಬೀತನ್ನು ರಾಜ್ಯಪಾಲರು ನಿಗದಿ ಮಾಡಲಿದ್ದಾರೆ. ನಮ್ಮ ಸಂಖ್ಯಾಬಲ ಹೆಚ್ಚಿದೆ. ಕಾನೂನಿನಡಿಯಲ್ಲಿ ಅತೃಪ್ತರ ರಾಜೀನಾಮೆ ಬಗೆಹರೆಯಲಿದೆ ಎಂದು ರೇಣುಕಾಚಾರ್ಯ ಹೇಳಿದರು.
ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ, ಈ ರಾಜ್ಯಕ್ಕೆ ಸುಭದ್ರ ಸರಕಾರ ಕೊಡುವುದು ನಮ್ಮ ಮೊದಲ ಆದ್ಯತೆ, ಮುಂಬೈನಲ್ಲಿರುವ ಶಾಸಕರು ಬರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಶಾಸಕ ರೇಣುಕಾಚಾರ್ಯ ಇದೇ ವೇಳೆ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
PoliticsರಾಜಕೀಯChief Ministerಮುಖ್ಯಮಂತ್ರಿಪ್ರಮಾಣವಚನಬಿಎಸ್ ಯಡಿಯೂರಪ್ಪರೇಣುಕಾಚಾರ್ಯSwearingBS YedyurappaRenukachaya
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


