ಪದಗ್ರಹಣ ಮಾಡುತ್ತಿದ್ದಂತೆಯೇ ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಖಡಕ್ ಎಚ್ಚರಿಕೆ: ಇಲ್ಲಿದೆ ವಿವರ
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಯಡಿಯೂರಪ್ಪ ಆಡಳಿತ ಯಂತ್ರವನ್ನು ಮತ್ತಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರತರಾಗಿದ್ದಾರೆ.

Published On :
ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಯಡಿಯೂರಪ್ಪ ಆಡಳಿತ ಯಂತ್ರವನ್ನು ಮತ್ತಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರತರಾಗಿದ್ದಾರೆ.
ಸಂಜೆ ಮೊದಲ ಸಚಿವ ಸಂಪುಟ ಸಭೆಯಲ್ಲಿ ರೈತರಿಗೆ, ನೇಕಾರರಿಗೆ ಕೊಡುಗೆ ನೀಡುವ ಯೋಜನೆಗಳನ್ನು ಘೋಷಿಸಿದ ನಂತರ ಯಡಿಯೂರಪ್ಪ ಅಧಿಕಾರಿಗಳಿಗೂ ಖಡಕ್ ಸಂದೇಶ ರವಾನೆ ಮಾಡಿದ್ದಾರೆ.
ಬರ ಹಾಗೂ ಮಳೆಗಾಲದ ನಿರ್ವಹಣೆ ಸಂಬಂಧ ಸಭೆ ನಡೆಸಬೇಕು, 15 ದಿನಕ್ಕೊಮ್ಮೆ ಕಡ್ಡಾಯ ಸಭೆ ನಡೆಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಆ.2-3 ರಂದು ತಾವು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಸಿಇಒ ಗಳೊಂದಿಗೆ ಸಭೆ ನಡೆಸುವುದಾಗಿ ಹೇಳಿರುವ ಸಿಎಂ ಯಡಿಯೂರಪ್ಪ ಮುಖ್ಯಕಾರ್ಯದರ್ಶಿಗಳು 2 ಬಾರಿ ಜಿಲ್ಲಾ ಪ್ರವಾಸ ಮಾಡಬೇಕೆಂದು ಸೂಚನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಅಧಿಕಾರಿಗಳುDroughtGovernment OfficialsKarnataka politicsಮುಖ್ಯಮಂತ್ರಿ ಯಡಿಯೂರಪ್ಪCM Yeddyurappaಬರ ನಿರ್ವಹಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


