ಯಡಿಯೂರಪ್ಪ ಬಹುಮತ ಸಾಬೀತು ತಡೆಗೆ ಕಾಂಗ್ರೆಸ್ ಹೊಸ ತಂತ್ರ.!
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಆಗಮಿಸಿ ಮಹತ್ವದ ಮಾತುಕತೆ...

Published On :
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಆಗಮಿಸಿ ಮಹತ್ವದ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕೂತುಹಲ ಕೆರಳಿಸಿದೆ.
ಈ ಮೂಲಕ ಮುಂಬೈನಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್ ಜೆಡಿಎಸ್ ಅತೃಪ್ತ ಶಾಸಕರನ್ನು ಸೆಳೆಯಲು ಪ್ರಯತ್ನ ನಡೆದಿದೆ ಎಂಬ ಕೂತುಹಲ ಗರಿಗೆದರಿದೆ.
ಲಭ್ಯವಾಗಿರುವ ಖಚಿತ ಮಾಹಿತಿಯ ಪ್ರಕಾರ ಎಸ್.ಟಿ.ಸೋಮಶೇಖರ್, ಭೈರತಿ, ಮುನಿರತ್ನ ಅವರನ್ನು ಮರಳಿ ಸೆಳೆಯುವ ಪ್ರಯತ್ನ ನಡೆದಿದೆ ಎನ್ನಲಾಗಿದೆ. ಜೊತೆಗೆ ಈ ಮೂವರು ಶಾಸಕರು ತಮ್ಮ ರಾಜೀನಾಮೆಯನ್ನು ವಾಪಸ್ ಪಡೆಯುವಂತೆ ಮನವೊಲಿಸಿ, ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳುವ ಪ್ರಯತ್ನವೂ ನಡೆದಿದೆ ಎನ್ನಲಾಗಿದೆ.
ಮೂವರು ಶಾಸಕರು ರಾಮಲಿಂಗಾರೆಡ್ಡಿ ಅವರ ಜೊತೆ ಸಂಪರ್ಕದಲ್ಲಿ ಇದ್ದಾರೆ ಎಂದೂ ಹೇಳಲಾಗುತ್ತಿದ್ದು, ಬಿಜೆಪಿ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸದಂತೆ ಅಡ್ಡಗಾಲು ಹಾಕಲು ಕಾಂಗ್ರೆಸ್ ಈ ತಂತ್ರಗಾರಿಕೆ ಮಾಡುತ್ತಿದೆ ಎಂದೂ ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


