ಬೆಂಗಳೂರಿನ 4 ಶಾಸಕರನ್ನು ಮಣಿಸಲು ಜೆಡಿಎಸ್ ವರಿಷ್ಠರಿಂದ ಪ್ರತಿತಂತ್ರ
ತಮ್ಮ ವಿಧಾನಸಭಾ ಸದಸ್ಯತ್ವಗಳಿಗೆ ರಾಜೀನಾಮೆ ನೀಡುವ ಮೂಲಕ ಮೈತ್ರಿ ಸರ್ಕಾರದ ಪತನಕ್ಕೆ...

Published On :
ಬೆಂಗಳೂರು: ತಮ್ಮ ವಿಧಾನಸಭಾ ಸದಸ್ಯತ್ವಗಳಿಗೆ ರಾಜೀನಾಮೆ ನೀಡುವ ಮೂಲಕ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದ ಶಾಸಕರಿಗೆ ತಕ್ಕ ಪಾಠ ಕಲಿಸಲು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮುಂದಾಗಿದ್ದಾರೆ.
ಬೆಂಗಳೂರು ನಗರದ ಈ ನಾಲ್ವರು ಶಾಸಕರು ಉಪಚುನಾವಣೆಯಲ್ಲಿ ಗೆಲುವು ಸಾಧಿಸದಂತೆ ಕಾರ್ಯತಂತ್ರ ರೂಪಿಸುತ್ತಿದ್ದಾರೆ.
ಕೆ ಆರ್ ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್, ಯಶವಂತಪುರ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್, ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಹಾಗೂ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಶಾಸಕ ಜೆಡಿಎಸ್ ಶಾಸಕ ಗೋಪಾಲಯ್ಯ ಮೈತ್ರಿ ಸರ್ಕಾರದ ವಿರುದ್ಧ ಕಾರ್ಯಾಚರಣೆ ನಡೆಸಿದ್ದಲ್ಲದೆ, ಸರ್ಕಾರ ಪತನಕ್ಕೆ ಕಾರಣರಾಗಿದ್ದರು.
ಹೀಗಾಗಿ ಇವರನ್ನು ಶತಾಯಗತಾಯ ಸೋಲಿಸಲೇಬೇಕೆಂದು ಪಣ ತೊಟ್ಟಿರುವ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಭರ್ಜರಿ ಕಾರ್ಯತಂತ್ರ ಸಿದ್ದಪಡಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


