ಪ್ರಮಾಣ ವಚನಕ್ಕೆ ಒಂದೇ ನಿಮಿಷದಲ್ಲಿ ರಾಜ್ಯಪಾಲರು ಅನುಮತಿ ನೀಡಿದ್ದು ವಿಪರ್ಯಾಸ: ಜೆಡಿಎಸ್
ಬಹುಮತದ ಸರ್ಕಾರ ರಚನೆಯ ಕುರಿತು ರಾಜ್ಯಪಾಲರು ಯಾವುದೇ ಅನುಮಾನ ವ್ಯಕ್ತಪಡಿಸದೇ ಒಂದೇ ನಿಮಿಷದಲ್ಲಿ ಅನುಮತಿ ನೀಡಿದ್ದು ಪ್ರಜಾಪ್ರಭುತ್ವದ ..

Published On :
ಬೆಂಗಳೂರು: ಬಹುಮತದ ಸರ್ಕಾರ ರಚನೆಯ ಕುರಿತು ರಾಜ್ಯಪಾಲರು ಯಾವುದೇ ಅನುಮಾನ ವ್ಯಕ್ತಪಡಿಸದೇ ಒಂದೇ ನಿಮಿಷದಲ್ಲಿ ಅನುಮತಿ ನೀಡಿದ್ದು ಪ್ರಜಾಪ್ರಭುತ್ವದ ವಿರೋಧಿ ನಿರ್ಧಾರ ಎಂದು ಜೆಡಿಎಸ್ ಹೇಳಿದೆ.
ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಜೆಡಿಎಸ್, ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲು ನೈತಕತೆ ಇಲ್ಲ ಎಂದು ಹೇಳಿದೆ.
ವಿಧಾನಸಭೆಯ ಸಂಖ್ಯಾಬಲ 222, ಬಹುಮತಕ್ಕೆ ಬೇಕಾಗಿರುವ ಸಂಖ್ಯಾಬಲ 112. ಆದರೆ ಬಿಜೆಪಿಯವರು ನಮಗೆ 105 ಶಾಸಕರ ಬೆಂಬಲವಿದೆ ಎಂದು ಸರ್ಕಾರ ರಚನಗೆ ಹಕ್ಕು ಮಂಡಿಸಿದ್ದು ಇದಕ್ಕೆ ರಾಜ್ಯಪಾಲರು ಬಹುಮತದ ಸರ್ಕಾರ ರಚನೆಯ ಕುರಿತು ಯಾವುದೇ ಅನುಮಾನ ವ್ಯಕ್ತಪಡಿಸದೇ ಒಂದೇ ನಿಮಿಷದಲ್ಲಿ ಅನುಮತಿ ನೀಡಿದ್ದು ಪ್ರಜಾಪ್ರಭುತ್ವದ ವಿರೋಧಿ ನಿರ್ಧಾರ ಎಂದು ಹೇಳಿದೆ.
ಕರ್ನಾಟಕ ಇತಿಹಾಸದಲ್ಲೇ ಇಂದು ಅತ್ಯಂತ ಕರಾಳ ದಿನ. ಬಿಜೆಪಿಯಿಂದಾಗಿ, ಪ್ರಜಾಪ್ರಭತ್ವದ ಕಗ್ಗೊಲೆಯಾಗುತ್ತಿದೆ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


