ರಾಜಕೀಯ

'ಬಿಜೆಪಿಗೆ ಸಂಖ್ಯಾಬಲ ಇಲ್ಲ: ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವೇ ಇಲ್ಲ'

ಇಂದು ಸಂಜೆ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಸೇರಿದಂತೆ ಹಲವರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ...

'ಬಿಜೆಪಿಗೆ ಸಂಖ್ಯಾಬಲ ಇಲ್ಲ: ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವೇ ಇಲ್ಲ'
ಯಡಿಯೂರಪ್ಪ
Published On :
ಬೆಂಗಳೂರು: ಇಂದು ಸಂಜೆ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಸೇರಿದಂತೆ ಹಲವರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.
ಇಂದು ಬಿಜೆಪಿಗೆ ಸಂಖ್ಯಾಬಲ ಇಲ್ಲದ ಕಾರಣ ಯಾವುದೇ ಕಾರಣಕ್ಕೂ ಹಕ್ಕು ಮಂಡನೆಯಾಗಲಿ ಅಥವಾ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವೇ ಇಲ್ಲ. ಬಿಜೆಪಿ ಮತ್ತು ಯಡಿಯೂರಪ್ಪನವರು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೂಲಭೂತ ಹಾಗೂ ಸಾಮಾನ್ಯ ಜ್ಞಾನ ಹೊಂದುವುದು ಅವಶ್ಯಕ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಟ್ವೀಟ್ ಮಾಡಿದೆ.
ಭ್ರಷ್ಟಾಚಾರದ ಆರೋಪದಲ್ಲಿ ಜೈಲು ಹಕ್ಕಿಯಾಗಿದ್ದ ಯಡಿಯೂರಪ್ಪ  ತಮ್ಮ ಅಪ್ರತಿಮ ಬುದ್ಧಿ ಶಕ್ತಿ ಬಳಸಿ ಕುದುರೆ ವ್ಯಾಪಾರ ನಡೆಸಿದ್ದಾರೆ, 2008 ರಿಂದ 2011ರ ವರೆಗೆ ಸಿಎಂ ಆಗಿದ್ದ ಅವಧಿಯಲ್ಲಿ ನಡೆದ ಹಗರಣಗಳನ್ನು ಕರ್ನಾಟಕ ಜನತೆ ನೆನಪಿಸಿಕೊಳ್ಳಬೇಕು ಎಂದು ಟ್ವಿಟ್ಟರ್ ನಲ್ಲಿ ಕಾಂಗ್ರೆಸ್ ಬರೆದುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.