ಯಡಿಯೂರಪ್ಪ ನಾಯಕತ್ವದಡಿ ಬಿಜೆಪಿಯಿಂದ ಸುಭದ್ರ, ಅಭಿವೃದ್ಧಿ ಕೇಂದ್ರಿತ ಆಡಳಿತ- ಅಮಿತ್ ಶಾ
ನೂತನ ಮುಖ್ಯಮಂತ್ರಿಯಾಗಿ ಇಂದು ಅಧಿಕಾರ ಸ್ವೀಕರಿಸಿದ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಭಿನಂದಿಸಿದ್ದಾರೆ. ಯಡಿಯೂರಪ್ಪ ನಾಯಕತ್ವದಲ್ಲಿ ಸುಭದ್ರ, ಅಭಿವೃದ್ಧಿ ಕೇಂದ್ರಿತ ಆಡಳಿತವನ್ನು ಬಿಜೆಪಿ ನೀಡಲಿದೆ ಎಂದು ಅವರು ಭರವಸೆ ನೀಡಿದ್ದಾರೆ.

Published On :
ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಇಂದು ಅಧಿಕಾರ ಸ್ವೀಕರಿಸಿದ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಭಿನಂದಿಸಿದ್ದಾರೆ. ಯಡಿಯೂರಪ್ಪ ನಾಯಕತ್ವದಲ್ಲಿ ಸುಭದ್ರ, ಅಭಿವೃದ್ಧಿ ಕೇಂದ್ರಿತ ಆಡಳಿತವನ್ನು ಬಿಜೆಪಿ ನೀಡಲಿದೆ ಎಂದು ಅವರು ಭರವಸೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಬಿ.ಎಸ್ ಯಡಿಯೂರಪ್ಪ ನಾಯಕತ್ವದಡಿ ಬಿಜೆಪಿ ಸುಭದ್ರ, ರೈತಪರ ಹಾಗೂ ಅಭಿವೃದ್ಧಿ ಕೇಂದ್ರಿತ ಆಡಳಿತವನ್ನು ನೀಡಲಿದೆ. ಕರ್ನಾಟಕದ ಜನತೆಯ ಆಶೋತ್ತರಗಳನ್ನು ಕಾಪಾಡುವಲ್ಲಿ ಬಿಜೆಪಿ ಬದ್ಧವಾಗಿರುವುದಾಗಿ ಕೇಂದ್ರ ಗೃಹ ಸಚಿವರು ಆಗಿರುವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
ಬಿಎಸ್ ಯಡಿಯೂರಪ್ಪ ನಾಲ್ಕನೇ ಬಾರಿಗೆ ಕರ್ನಾಟಕದ 25 ನೇ ಮುಖ್ಯಮಂತ್ರಿಯಾಗಿ ಇಂದು ಅಧಿಕಾರ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಾಜೂಬಾಯಿ ವಾಲಾ , ನೂತನ ಮುಖ್ಯಮಂತ್ರಿಗೆ ಪ್ರಮಾಣ ವಚನ ಹಾಗೂ ಅಧಿಕಾರದ ಗೌಪ್ಯತೆ ಬೋಧಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿ ಸರ್ಕಾರGovernmentಅಮಿತ್ ಶಾKarnataka politicsಮುಖ್ಯಮಂತ್ರಿ ಯಡಿಯೂರಪ್ಪCM YediyurappaAmit sha ರಾಜ್ಯ ರಾಜಕೀಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


