ಉಡುಗೊರೆ ಬೇಡ, ಹಾರೈಕೆ ಸಾಕು: ಅಭಿಮಾನಿಗಳಿಗೆ ಯಡಿಯೂರಪ್ಪ ಮನವಿ
ತಮಗೆ ಶುಭಕೋರಲು ಬರುವ ಅಭಿಮಾನಿಗಳು, ಕಾರ್ಯಕರ್ತರು ಹೂಗುಚ್ಛ, ಹಾರ, ಶಾಲುಗಳಿಗಾಗಿ ಹಣ ವೆಚ್ಚಮಾಡುವುದು ಬೇಡ ಎಂದು ನೂತನ...

Published On :
ಬೆಂಗಳೂರು: ತಮಗೆ ಶುಭಕೋರಲು ಬರುವ ಅಭಿಮಾನಿಗಳು, ಕಾರ್ಯಕರ್ತರು ಹೂಗುಚ್ಛ, ಹಾರ, ಶಾಲುಗಳಿಗಾಗಿ ಹಣ ವೆಚ್ಚಮಾಡುವುದು ಬೇಡ ಎಂದು ನೂತನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಮ್ಮ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
ಉಡುಗೊರೆ ಬೇಡ, ನಿಮ್ಮ ಹಾರೈಕೆಯೇ ನನಗೆ ದೊಡ್ಡ ಉಡುಗೊರೆ ಎಂದು ಬಿಎಸ್ ವೈ ಟ್ವೀಟ್ ಮಾಡಿ ಮನವಿ ಮಾಡಿದ್ದಾರೆ.
ತಮ್ಮನ್ನು ಭೇಟಿ ಮಾಡಿ ಶುಭಕೋರಲು ರಾಜ್ಯದ ಮೂಲೆ ಮೂಲೆಯಿಂದ ಅಭಿಮಾನಿಗಳು, ಕಾರ್ಯಕರ್ತರು ಬರುವುದನ್ನು ಕಂಡು ತಮಗೆ ಸಂತೋಷವಾಗಿದೆ. ಆದರೆ, ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ, ಇಂತಹ ಸಂದರ್ಭದಲ್ಲಿ ಹೂಗುಚ್ಚ, ಹಾರ, ಶಾಲುಗಳ ಖರೀದಿಸಲು ವೆಚ್ಚ ಮಾಡುವುದು ಬೇಡ ಎಂದು ಮನವಿ ಮಾಡಿರುವ ಯಡಿಯೂರಪ್ಪ , ಅಭಿಮಾನಿಗಳು, ಕಾರ್ಯಕರ್ತರ ಹಾರೈಕೆಯೇ ತಮಗೆ ಬಹುದೊಡ್ಡ ಉಡುಗೊರೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


