'ಸಿದ್ದರಾಮಯ್ಯ, ಎಂಬಿ.ಪಾಟೀಲ್ ದಾರಿ ತಪ್ಪಿದ ಮಕ್ಕಳು: ಅತೃಪ್ತ ಶಾಸಕರು ಯಾರನ್ನೂ ಸಂಪರ್ಕಿಸಿಲ್ಲ'
ನಮ್ಮ ಗುಂಪಿನಲ್ಲಿರುವ ಯಾವ ಶಾಸಕರೂ ಸಹ ಯಾರನ್ನೂ ಸಂಪರ್ಕಿಸಿಲ್ಲ, ಮೈತ್ರಿ ನಾಯಕರೂ ಸಹ ನಮ್ಮನ್ನು ಸಂಪರ್ಕಿಸಿಲ್ಲ ಎಂದು ವಿಶ್ವನಾಥ್ ಹೇಳಿದ್ದಾರೆ....

Published On :
ಬೆಂಗಳೂರು: ನಮ್ಮ ಗುಂಪಿನಲ್ಲಿರುವ ಯಾವ ಶಾಸಕರೂ ಸಹ ಯಾರನ್ನೂ ಸಂಪರ್ಕಿಸಿಲ್ಲ, ಮೈತ್ರಿ ನಾಯಕರೂ ಸಹ ನಮ್ಮನ್ನು ಸಂಪರ್ಕಿಸಿಲ್ಲ ಎಂದು ವಿಶ್ವನಾಥ್ ಹೇಳಿದ್ದಾರೆ.
ಇಬ್ಬರು ಅತೃಪ್ತ ಶಾಸಕರು ಮುಂಬಯಿಯಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಲು ಫೋನ್ ಮಾಡಿದ್ದರು ಎಂದು ಮಾಜಿ ಸಚಿವ ಎಂ ಬಿ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಎಟ್, ವಿಶ್ವನಾಥ್ ಎಂ.ಬಿ.ಪಾಟೀಲ್ ಸೇರಿದಂತೆ ಕಾಂಗ್ರೆಸ್ ನಾಯಕರ ಹೇಳಿಕೆಗಳು ಹಸಿ ಸುಳ್ಳು ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಯಾವ ಅತೃಪ್ತ ಶಾಸಕರೂ ಸಹ ಯಾರನ್ನೂ ಸಂಪರ್ಕಿಸಿಲ್ಲ. ಎಂ.ಬಿ.ಪಾಟೀಲ್ ಹೇಳುತ್ತಿರುವುದು ಹಸಿ ಸುಳ್ಳು. ಕನ್ಫ್ಯೂಸ್ ಮಾಡಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಈ ರೀತಿ ಸುಳ್ಳು ಹೇಳಿ ದಾರಿ ತಪ್ಪಿಸುತ್ತಿದ್ದಾರೆ.
ಆದರೆ ಯಾರೂ ದಾರಿ ತಪ್ಪುವುದಿಲ್ಲ. ಅವರೇ ದಾರಿ ತಪ್ಪಿದ್ದಾರೆ. ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ಸೇರಿದಂತೆ ಅವರೊಂದಿಗೆ ಇರುವವರು ದಾರಿ ತಪ್ಪಿದ ಮಕ್ಕಳು. ರಾಜ್ಯ ರಾಜಕಾರಣದ ಈ 30 ದಿನಗಳ ಬೆಳವಣಿಗೆಯಲ್ಲಿ ಅವರು ದಾರಿ ತಪ್ಪಿದ ಮಕ್ಕಳು ಎಂದು ವ್ಯಂಗ್ಯವಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


