ರಾಜಕೀಯ

ಮಾಜಿ ಕೇಂದ್ರ ಸಚಿವ ಜೈಪಾಲ್‌ ರೆಡ್ಡಿ ನಿಧನಕ್ಕೆ ಸಂತಾಪ ಸೂಚಿಸಿದ ಸ್ಪೀಕರ್

ಇಂದು ನಿಧನರಾದ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಜೈಪಾಲ್ ರೆಡ್ಡಿ ಅವರಿಗೆ ಸ್ಪೀಕರ್ ರಮೇಶ್ ಕುಮಾರ್ ಅವರು ಸಂತಾಪ ಸೂಚಿಸಿದರು.

ಮಾಜಿ ಕೇಂದ್ರ ಸಚಿವ ಜೈಪಾಲ್‌ ರೆಡ್ಡಿ ನಿಧನಕ್ಕೆ ಸಂತಾಪ ಸೂಚಿಸಿದ ಸ್ಪೀಕರ್
ಜೈಪಾಲ್‌ ರೆಡ್ಡಿ ನಿಧನಕ್ಕೆ ಸಂತಾಪ ಸೂಚಿಸಿದ ಸ್ಪೀಕರ್
Published On :
ಬೆಂಗಳೂರು: ಇಂದು ನಿಧನರಾದ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಜೈಪಾಲ್ ರೆಡ್ಡಿ ಅವರಿಗೆ ಸ್ಪೀಕರ್ ರಮೇಶ್ ಕುಮಾರ್ ಅವರು ಸಂತಾಪ ಸೂಚಿಸಿದರು.
ಅತೃಪ್ತ ಶಾಸಕರ ಅನರ್ಹತೆ ವಿಚಾರ ಇತ್ಯರ್ಥ ಪಡಿಸಲು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್ ಅವರು, ಇಂದು ನಿಧನರಾದ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಜೈಪಾಲ್ ರೆಡ್ಡಿ ಅವರನ್ನು ನೆನೆದು ಕಂಬನಿ ಮಿಡಿದರು.
ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜೈಪಾಲ್ ರೆಡ್ಡಿ ಅವರನ್ನು ನೆನೆದು ಗದ್ಗಧಿತರಾದ ರಮೇಶ್ ಕುಮಾರ್ ಅವರು, ಇದು ನನಗೆ ಅತ್ಯಂತ ಖೇದದ ದಿನ. ನನ್ನ ಹಿರಿಯ ಸೋದರರಂತಿದ್ದ ಜೈಪಾಲ್ ರೆಡ್ಡಿ ನಿಧನರಾಗಿದ್ದಾರೆ. ನನಗೆ ತೀವ್ರ ಬೇಸರವಾಗಿದೆ. ಅವರು ಒಬ್ಬ ಒಳ್ಳೆಯ ಮನುಷ್ಯ, ಸಂಸದೀಯಪಟು ಆಗಿದ್ದರು ಎಂದು ಹೇಳಿದರು.
ಅಂತೆಯೇ 'ಪಕ್ಷಾಂತರ ನಿಷೇಧ ಕಾಯ್ದೆ ಸಂಸತ್ತಿನಲ್ಲಿ ಮಂಡನೆಯಾದಾಗ ಜೈಪಾಲ್ ರೆಡ್ಡಿ ಮನದ ಮಾತುಗಳನ್ನು ಹೇಳಿದ್ದರು. ಜೈಪಾಲ್‌ ರೆಡ್ಡಿ ಅವರನ್ನು ನೆನೆದು ಕಣ್ಣೀರಿಟ್ಟ ಸ್ಪೀಕರ್ ರಮೇಶ್‌ ಕುಮಾರ್. ಅಟಲ್‌ ಬಿಹಾರಿ ವಾಜಪೇಯಿ, ಎಲ್‌.ಕೆ.ಆಡ್ವಾಣಿ, ಮುಧುಲಿಮೆ, ಮೋಹನ್ ಕುಮಾರ್ ಮಂಗಳಂ, ಇಂದ್ರಜಿತ್ ಗುಪ್ತ, ಚಂದ್ರಜಿತ್ ಯಾದವ್, ಜಾರ್ಜ್ ಫರ್ನಾಂಡಿಸ್ ಅಂಥವರು ಈ ದೇಶದಲ್ಲಿ ಇದ್ರಾ ಅಂತ ನನಗೆ ಅನ್ನಿಸುತ್ತೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.