ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿರುತ್ತಾರೆ: ದೇವೇಗೌಡ
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಗೊಂಡ ನಂತರ ಮತ್ತೆ ದೋಸ್ತಿ ಮುಂದುವರಿಯುವುದೇ ಎಂದು ಎಲ್ಲರನ್ನು ಕಾಡಿದ್ದ ಪ್ರಶ್ನೆಗೆ ಜೆಡಿಎಸ್ ವರಿಷ್ಠ ಸುಳಿವು ...

Published On :
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಗೊಂಡ ನಂತರ ಮತ್ತೆ ದೋಸ್ತಿ ಮುಂದುವರಿಯುವುದೇ ಎಂದು ಎಲ್ಲರನ್ನು ಕಾಡಿದ್ದ ಪ್ರಶ್ನೆಗೆ ಜೆಡಿಎಸ್ ವರಿಷ್ಠ ಸುಳಿವು ನೀಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಪಕ್ಷ ನಾಯಕರಾಗಲಿದ್ದಾರೆ ಎಂದು ದೇವೇಗೌಡರು ತಿಳಿಸಿದ್ದಾರೆ.
ಕಾಂಗ್ರೆಸ್ 2ನೇ ಅತಿ ದೊಡ್ಡ ಪಕ್ಷವಾಗಿದೆ. ಮಾಜಿ ಸಿಎಂ ಕುಮಾರಸ್ವಾಮಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನಾಗಿರುತ್ತಾರೆ, ಕೇಂದ್ರದ ನಾಯಕರ ಜೊತೆ ಚರ್ಚಿಸಿ ಕಾಂಗ್ರೆಸ್ ಮೈತ್ರಿ ಮುಂದುವರಿಸುವ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಒಪ್ಪಿಗೆ ಮೇರೆಗೆ ಕುಮಾರಸ್ವಾಮಿ ಅವರನ್ನು ಸಿಎಂ ಮಾಡಲಾಗಿತ್ತು. ಕಾಂಗ್ರೆಸ್ ಹೈಕಮಾಂಡ್ ಮೈತ್ರಿ ಮುಂದುವರಿಸುವ ಬಗ್ಗೆ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ
ಮೈತ್ರಿ ಸರ್ಕಾರದಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಸ್ಥಾನಮಾನ ನೀಡಲು ಸಾಧ್ಯವಾಗಲಿಲ್ಲ. ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ್ದೇನೆ, ಅವರಲ್ಲಿ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್JDSPoliticsರಾಜಕೀಯSiddaramaiahHD DevegowdaOpposition Leaderpoltic ಎಚ್.ಡಿ ದೇವೇಗೌಡ. ಸಿದ್ದರಾಮಯ್ಯವಿರೋಧಕ್ಷ ನಾಯಕ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


