ಶಾಸಕರ ಅನರ್ಹತೆ ವಿವಾದ: ಹೈಕೋರ್ಟ್ ಗೆ ದಿನೇಶ್ ಗುಂಡೂರಾವ್ ಕೇವಿಯಟ್
ಅನರ್ಹಗೊಂಡಿರುವ 8 ಕಾಂಗ್ರೆಸ್ ಶಾಸಕರು ತಮ್ಮ ಅನರ್ಹತೆ ಆದೇಶ ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದರೆ ತಮಗೆ ನೋಟಿಸ್ ನೀಡಿದ ನಂತರವೇ ಮಧ್ಯಂತರ ಆದೇಶ ಹೊರಡಿಸುವಂತೆ ಕೋರಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೈಕೋರ್ಟ್ ಗೆ ಕೇವಿಯಟ್ ಸಲ್ಲಿಸಿದ್ದಾರೆ.

Published On :
ಬೆಂಗಳೂರು: ಅನರ್ಹಗೊಂಡಿರುವ 8 ಕಾಂಗ್ರೆಸ್ ಶಾಸಕರು ತಮ್ಮ ಅನರ್ಹತೆ ಆದೇಶ ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದರೆ ತಮಗೆ ನೋಟಿಸ್ ನೀಡಿದ ನಂತರವೇ ಮಧ್ಯಂತರ ಆದೇಶ ಹೊರಡಿಸುವಂತೆ ಕೋರಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೈಕೋರ್ಟ್ ಗೆ ಕೇವಿಯಟ್ ಸಲ್ಲಿಸಿದ್ದಾರೆ.
ಅರ್ಜಿಯಲ್ಲಿ ಅನರ್ಹಗೊಂಡ ಶಾಸಕರಾದ ಪ್ರತಾಪ್ ಗೌಡ ಪಾಟೀಲ್, ಬಿ. ಸಿ. ಪಾಟೀಲ್, ಶಿವರಾಮ್ ಹೆಬ್ಬಾರ್, ಎಸ್ .ಟಿ. ಸೋಮಶೇಖರ್ , ಬೈರತಿ ಬಸವರಾಜು, ಆನಂದ್ ಸಿಂಗ್, ರೋಷನ್ ಬೇಗ್ ಹಾಗೂ ಮುನಿರತ್ನ ಅವರನ್ನು ಪ್ರತಿವಾದಿಯನ್ನಾಗಿಸಲಾಗಿದೆ.
ಪಕ್ಷದಿಂದ ಬಂಡಾಯವೆದ್ದು, ರಾಜೀನಾಮೆ ನೀಡಿ ಮುಂಬೈಗೆ ತೆರಳಿದ್ದ ಹಾಗೂ ವಿಪ್ ಉಲ್ಲಂಘಿಸಿದ 8 ಶಾಸಕರನ್ನು ಅನರ್ಹಗೊಳಿಸುವಂತೆ ವಿಧಾನಸಭಾ ಸ್ಪೀಕರ್ ಗೆ ಮನವಿ ಸಲ್ಲಿಸಲಾಗಿತ್ತು. ಇದನ್ನು ಪರಿಗಣಿಸಿದ್ದ ಸ್ಪೀಕರ್ ಜುಲೈ 28 ರಂದು ಈ ಶಾಸಕರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


