ರಾಜಕೀಯ

' ಕ್ಲೀನ್ ಚಿಟ್ಸ್ ಗೃಹ ಸಚಿವಾಲಯ' ಪ್ರಿಯಾಂಕ್ ಖರ್ಗೆ ಹೇಳಿಕೆ ವಿರುದ್ಧ ಡಿವಿಎಸ್ ಕಿಡಿ

ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ಸಿ. ಸದಾನಂದಗೌಡ ಕಿಡಿಕಾರಿದ್ದಾರೆ.

' ಕ್ಲೀನ್ ಚಿಟ್ಸ್ ಗೃಹ ಸಚಿವಾಲಯ' ಪ್ರಿಯಾಂಕ್ ಖರ್ಗೆ ಹೇಳಿಕೆ ವಿರುದ್ಧ ಡಿವಿಎಸ್ ಕಿಡಿ
ಸಂಗ್ರಹ ಚಿತ್ರ
Published On :

ಬೆಂಗಳೂರು:  ಅಮಿತ್ ಶಾ ಕೇಂದ್ರ ಗೃಹ ಸಚಿವರಾಗಿದ್ದು, ಇನ್ನು ಮೇಲೆ ಈ ಖಾತೆಗೆ ಕ್ಲೀನ್ ಚಿಟ್ ನೀಡುವ ಸಚಿವಾಲಯ ಎಂದು ಮರು ನಾಮಕರಣ ಮಾಡುವುದು ಸೂಕ್ತ ಎಂದು ಟ್ವೀಟ್ ಮಾಡಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ಸಿ. ಸದಾನಂದಗೌಡ ಕಿಡಿಕಾರಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರೇ ಕೈ ತೋರಿಸಿ ಅವಲಕ್ಷಣ ಹೇಳಿಸಿಕ್ಕೊಳಬೇಡಿ, ನಿಮ್ಮ ಪಕ್ಷದ ಚಿಹ್ನೆ ಕೈ.  ಅದರ ಅವಲಕ್ಷಣ ದೇಶದ ಜನ ಹೇಳಿ 10 ದಿನವೂ ಆಗಿಲ್ಲ , ಆಗಲೇ ಶುರು ಮಾಡಿದ್ರಲ್ಲ, ನಿಮ್ಮ ಹಿರಿಯಕ್ಕನ ಚಾಳಿ. ಮೊದಲು ನಿಮ್ಮ ಮನೆ ಸರಿ ಮಾಡ್ಕೊಳಿ ಎಂದಿದ್ದಾರೆ.
ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ನೆಟ್ಟಿಗರು ಕೂಡಾ ಹರಿಹಾಯ್ದಿದ್ದಾರೆ. ನಿಮ್ಮ ಪಕ್ಷಕ್ಕೆ ಬೇಲ್ ಪಾರ್ಟಿ ಎಂದು ಮರು ನಾಮಕರಣ ಮಾಡುವುದು ಸೂಕ್ತ ಎಂದು ನರೇನ್ ಶೆಟ್ಟಿ ಎಂಬುವರು ಪ್ರತಿಕ್ರಿಯಿಸಿದ್ದಾರೆ. ಈ ತರ ಉಡಾಫೆ ಹೇಳಿಕೆ ನೀಡಿದ್ದಕ್ಕೆ ಜನ ಸರಿಯಾದ ಉತ್ತರ ಕೊಟ್ಟಿರೋದು ಎಂದು ಕಲ್ಲೇಶ್ ಅಚಾರ್ ಎಂಬವರು ಪ್ರತಿಕ್ರಿಯಿಸಿದ್ದಾರೆ.
I think it is better to rename your party as On Bail Party.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.