ಕೇಂದ್ರ ಸಂಪುಟದಲ್ಲಿ ಲಿಂಗಾಯತರನ್ನು ಕಣೆಗಣಿಸುವ ಮೂಲಕ ಮೋದಿ ಸರ್ಕಾರದಿಂದ ಅನ್ಯಾಯ: ಎಂಬಿಪಿ
ಕೇಂದ್ರ ಸರ್ಕಾರ ಸಚಿವ ಸಂಪುಟ ವಿಸ್ತರಣೆಯಲ್ಲಿ ಲಿಂಗಾಯತರನ್ನು ಸಂಪೂರ್ಣವಾಗಿ ಕಡೆಗಣಿಸಿ ಮೋದಿ ಸರ್ಕಾರ ವೀರಶೈವರಿಗೆ ಅವಮಾನ ಮಾಡಿದೆ ಎಂದು ...

Published On :
ವಿಜಯಪುರ: ಕೇಂದ್ರ ಸರ್ಕಾರ ಸಚಿವ ಸಂಪುಟ ವಿಸ್ತರಣೆಯಲ್ಲಿ ಲಿಂಗಾಯತರನ್ನು ಸಂಪೂರ್ಣವಾಗಿ ಕಡೆಗಣಿಸಿ ಮೋದಿ ಸರ್ಕಾರ ವೀರಶೈವರಿಗೆ ಅವಮಾನ ಮಾಡಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಿಂದ 10 ಜನ ಲಿಂಗಾಯತ ಸಂಸದರು ಆಯ್ಕೆಯಾಗಿದ್ದರೂ ಒಬ್ಬರಿಗೆ ಮಾತ್ರ ಸಂಪುಟದಲ್ಲಿ ಸ್ಥಾನ ನೀಡಿದ್ದಾರೆ. ಅದೂ ಕೂಡ ಸಂಪುಟ ದರ್ಜೆಯಲ್ಲ ಎಂದು ಹೇಳಿದ್ದಾರೆ. ಸುರೇಶ್ ಅಂಗಡಿ, ಪ್ರಹ್ಲಾದ ಜೋಶಿಯವರು ನಾಲ್ಕು ಬಾರಿ ಜಯಗಳಿಸಿದ್ದಾರೆ.
ಸುರೇಶ್ ಅಂಗಡಿಯವರನ್ನು ರಾಜ್ಯ ಸಚಿವರನ್ನಾಗಿ ಮಾಡಿ, ಪ್ರಹ್ಲಾದ ಜೋಶಿಯವರನ್ನು ಕ್ಯಾಬಿನೆಟ್ ದರ್ಜೆ ಸಚಿವರನ್ನಾಗಿ ಮಾಡಲಾಗಿದೆ. ಪ್ರಹ್ಲಾದ್ ಜೋಶಿ ಅವರಿಗೆ ಸಂಪುಟ ದರ್ಜೆ ಸ್ಥಾನ ನೀಡಲು ಅನುಸರಿಸಿರುವ ಮಾನದಂಡ ಏನು ಎಂದು ಪ್ರಶ್ನಿಸಿದ ಅವರು ಇದು ಬಿಜೆಪಿ ಮನಸ್ಥಿತಿಯನ್ನು ತೋರಿಸುತ್ತದೆ ಎಂದರು.
ರಾಜ್ಯದಲ್ಲಿ ಸಮಿಶ್ರ ಸರ್ಕಾರ ಬಿದ್ದು ಯಡಿಯೂರಪ್ಪ ಸಿಎಂ ಆಗುತ್ತಾರೆ ಎಂಬ ಸುರೇಶ ಅಂಗಡಿ ಅವರ ಹೇಳಿಕೆ ವಿಚಾರ ಪ್ರಸ್ತಾಪಿಸಿದ ಅವರು, ಸುರೇಶ್ ಅಂಗಡಿ ಅವರು ಮೊದಲು ತಮ್ಮ ಖಾತೆ ಕುರಿತು ಚಿಂತೆ ಮಾಡಲಿ. ಸುರೇಶ್ ಅಂಗಡಿಯವರಿಗೆ ಸ್ವಾಭಿಮಾನವಿದ್ದರೆ ತಮ್ಮ ಸ್ಥಾನವನ್ನು ತಿರಸ್ಕರಿಸಲಿ. ನಾನೇನಾದರೂ ಅವರ ಸ್ಥಾನದಲ್ಲಿದ್ದಾರೆ ನನಗೆ ಕೊಟ್ಟ ಸಚಿವ ಖಾತೆಯನ್ನು ತಿರಸ್ಕರಿಸುತ್ತಿದ್ದೆ ಎಂದು ಎಂ.ಬಿ.ಪಾಟೀಲ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


