ಬೆಂಗಳೂರು: ಡಿ.ಕೆ ಶಿವಕುಮಾರ್ ಭೇಟಿ ಮಾಡಿದ ಬಿಎಸ್ ವೈ ಪುತ್ರ ರಾಘವೇಂದ್ರ
ಶಿವಮೊಗ್ಗ ಕ್ಷೇತ್ರದ ನೂತನ ಸಂಸದರಾದ ಬಿ.ವೈ ರಾಘವೇಂದ್ರ ಇಂದು ಕೈ ನಾಯಕ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಬೇಟಿ ..

Published On :
ಬೆಂಗಳೂರು: ಶಿವಮೊಗ್ಗ ಕ್ಷೇತ್ರದ ನೂತನ ಸಂಸದರಾದ ಬಿ.ವೈ ರಾಘವೇಂದ್ರ ಇಂದು ಕೈ ನಾಯಕ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದರು.
ಬೆಂಗಳೂರಿನ ಡಿಕೆ ಶಿವಕುಮಾರ್ ಮನೆಯಲ್ಲಿ ಭೇಟಿ ಮಾಡಿದ ರಾಘವೇಂದ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಜೆಟ್ ನಲ್ಲಿ ಘೋಷಣೆಯಾದ ಒಟ್ಟು 6 ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಲು ಕೋರಿದರು.
ಅಗತ್ಯ ಅನುದಾನ ಬಿಡುಗಡೆ ಜೊತೆಗೆ ಕೂಡಲೇ ಟೆಂಡರ್ ಗೆ ಆಹ್ವಾನಿಸಿ ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಡಿ.ಕೆ.ಶಿವಕುಮಾರ್ ಬಳಿ ರಾಘವೇಂದ್ರ ಮನವಿ ಮಾಡಿದರು.
ಶಿವಮೊಗ್ಗ ನೀರಾವರಿ ಯೋಜಮೆ ಕಾಮಗಾರಿಗಳನ್ನು ತ್ವರಿತವಾಗಿ ಕೈಗೆತ್ತಿಕೊಳ್ಳುವಂತೆ ಶಿವಕುಮಾರ್ ಅವರ ಬಳಿ ಮನವಿ ಸಲ್ಲಿಸಿರುವುದಾಗಿ , ಸಂಸದ ರಾಘವೇಂದ್ರ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಶಿವಮೊಗ್ಗmeetsShivamoggaನೀರಾವರಿ ಯೋಜನೆಡಿಕೆ ಶಿವಕುಮಾರ್Raghavendraರಾಘವೇಂದ್ರd.K ShivakumarIrrigation Pojectsಬೇಟಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


