ಕಾಂಗ್ರೆಸ್ ನಲ್ಲಿ ಹಿರಿಯರು, ಪ್ರಮಾಣಿಕರಿಗೆ ಬೆಲೆ ಇಲ್ಲ: ಮಾಜಿ ಸಚಿವ ತನ್ವೀರ್ ಸೇಠ್
ಕಾಂಗ್ರೆಸ್ ಪಕ್ಷದಲ್ಲಿ ಹಿರಿಯರು ಮತ್ತು ಪ್ರಾಮಾಣಿಕರಿಗೆ ಬೆಲೆ ಇಲ್ಲದಂತಾಗಿದೆ ಎಂದ ಮಾಜಿ ಸಚಿವರಾದ ರಾಮಲಿಂಗಾ ರೆಡ್ಡಿ ಹಾಗೂ ರೋಷನ್ ಬೇಗ್...

Published On :
ಮೈಸೂರು: ಕಾಂಗ್ರೆಸ್ ಪಕ್ಷದಲ್ಲಿ ಹಿರಿಯರು ಮತ್ತು ಪ್ರಾಮಾಣಿಕರಿಗೆ ಬೆಲೆ ಇಲ್ಲದಂತಾಗಿದೆ ಎಂದ ಮಾಜಿ ಸಚಿವರಾದ ರಾಮಲಿಂಗಾ ರೆಡ್ಡಿ ಹಾಗೂ ರೋಷನ್ ಬೇಗ್ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಹೇಳುವ ಮೂಲಕ ಮಾಜಿ ಸಚಿವ ತನ್ವೀರ್ ಸೇಠ್ ಪಕ್ಷದ ನಾಯಕರ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ನರಸಿಂಹರಾಜ ಕ್ಷೇತ್ರದ ಶಾಸಕರೂ ಆಗಿರುವ ತನ್ವೀರ್ ಸೇಠ್, ರಾಜ್ಯ ಕಾಂಗ್ರೆಸ್ ನಾಯಕರ ಬಗ್ಗೆ ರಾಮಲಿಂಗಾ ರೆಡ್ಡಿ ಮತ್ತು ರೋಷನ್ ಬೇಗ್ ಸೇರಿದಂತೆ ಹಲವು ಹಿರಿಯರು ಅಸಮಾಧಾನ ಹೊರಹಾಕಿದ್ದಾರೆ. ಅವರ ಮಾತುಗಳಲ್ಲಿ ಸತ್ಯಾಂಶವಿದೆ. ಕಾಂಗ್ರೆಸ್ ಪಕ್ಷದಲ್ಲಿ ಹಿರಿಯರು ಮತ್ತು ಪ್ರಾಮಾಣಿಕರಿಗೆ ಬೆಲೆ ಇಲ್ಲದಂತಾಗಿದೆ ಎಂದು ಧ್ವನಿಗೂಡಿಸಿದ್ದಾರೆ.
ಸಚಿವ ಸ್ಥಾನದ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ರಾಜಕಾರಣಿ, ಸನ್ಯಾಸಿ ಅಲ್ಲ. ಆಡಳಿತ ಪಕ್ಷದಲ್ಲಿದ್ದೇನೆ. ಮುಸ್ಲಿಂ ಸಮುದಾಯ ತಮ್ಮನ್ನು ಗೆಲ್ಲಿಸಿ ಕಳುಹಿಸಿದೆ. ಹೀಗಾಗಿ ಸಹಜವಾಗಿಯೇ ತಾವು ಸಹ ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಧರ್ಮ ಪಾಲಿಸಲು ಎರಡೂ ಪಕ್ಷಗಳ ನಾಯಕರಿಗೆ ಸಾಧ್ಯವಾಗಿಲ್ಲ. ಈ ತಪ್ಪುಗಳನ್ನು ಸರಿಪಡಿಸಿಕೊಂಡು ಪಕ್ಷ ಸಂಘಟನೆ ಮಾಡಬೇಕಾದ ಅಗತ್ಯವಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ರಾಜೀನಾಮೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಏಕೆಂದರೆ ಅವರು ನಮ್ಮ ಪಕ್ಷದವರಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


