ಮಂತ್ರಿ ಸ್ಥಾನ ಮಾರಾಟ ಮಾಡಲಾಗಿದೆ ಎಂಬ ಆರೋಪಕ್ಕೆ ದಿನೇಶ್ ಗುಂಡೂರಾವ್ ಹೇಳಿದ್ದೇನು?
ಮಂತ್ರಿ ಸ್ಥಾನ ಮಾರಾಟ ಮಾಡಲಾಗಿದೆ ಎಂಬ ಆರೋಪವನ್ನೂ ಮಾಡಿದ್ದಾರೆ, ಶಾಸಕ ರೋಷನ್ ಬೇಗ್ ಪಕ್ಷದ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ...

Published On :
ಬೆಂಗಳೂರು: ಮಂತ್ರಿ ಸ್ಥಾನ ಮಾರಾಟ ಮಾಡಲಾಗಿದೆ ಎಂಬ ಆರೋಪವನ್ನೂ ಮಾಡಿದ್ದಾರೆ, ಶಾಸಕ ರೋಷನ್ ಬೇಗ್ ಪಕ್ಷದ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ಕೊಟ್ಟಿದ್ದಾರೆ, ಹೀಗಾಗಿ ಅವರ ಹೇಳಿಕೆ ಬಗ್ಗೆ ಹೈಕಮಾಂಡ್ ಗಮನಕ್ಕೆ ತರಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಪಕ್ಷದ ಹಿರಿಯ ನಾಯಕರನ್ನು ಕಡೆಗಣಿಸಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಯಾರನ್ನೂ ಕಡೆಗಣಿಸಿಲ್ಲ, ಪಕ್ಷ ಯಾರೊಬ್ಬರ ಆಸ್ತಿಯೂ ಇಲ್ಲ, ಟಿಕೆಟ್ ನೀಡುವಾಗಲೂ ಎಲ್ಲರ ಅಭಿಪ್ರಾಯ ಕೇಳಿದ್ದೇವೆ, ಅವರನ್ನು ಕೇಳಿಯೆ ಟಿಕೆಟ್ ನೀಡಲಾಗಿದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ
ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ಅಭಿಪ್ರಾಯ ಪಡೆದೇ ಚುನಾವಣೆಗೆ ಟಿಕೆಟ್ ನೀಡಲಾಗಿದೆ, ಹಿರಿಯ ಶಾಸಕ ರಾಮಲಿಂಗಾರೆಡ್ಡಿ ನಮ್ಮ ಸಂಯೋಜಕ ಸಮಿತಿಯ ಅಧ್ಯಕ್ಷರು, ಅವರಿಗೆ ಅವಕಾಶ ಖಂಡಿತ ಸಿಗಲಿದೆ ಎಂದು ಹೇಳಿದರು
ರೋಷನ್ ಬೇಗ್ ಎಐಸಿಸಿ ಸದಸ್ಯರೂ ಆಗಿದ್ದಾರೆ. ಹೀಗಾಗಿ ಈ ಸಂಬಂಧ ಹೈಕಮಾಂಡ್ ಗೆ ಸಂಪೂರ್ಣ ವರದಿ ಕಳುಹಿಸಲಾಗುವುದು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


