ದಿಢೀರ್ ಬೆಳವಣಿಗೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜಿನಾಮೆ?
ರಾಜ್ಯ ಕಾಂಗ್ರೆಸ್ ನಲ್ಲಿ ಉಂಟಾದ ದಿಢೀರ್ ಬೆಳವಣಿಗೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರನಡೆದಿದ್ದಾರೆ ...

Published On :
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಉಂಟಾದ ದಿಢೀರ್ ಬೆಳವಣಿಗೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರನಡೆದಿದ್ದಾರೆ ಎಂದು ಹೇಳಲಾಗುತ್ತಿದೆ.
ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ ನೈತಿಕ ಹೊಣೆಹೊತ್ತು ದಿನೇಶ್ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ತಮ್ಮ ರಾಜಿನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ರವಾನಿಸಿದ್ದಾರೆ ಎಂಬ ಸುದ್ದಿಗಳು ಕೇಳಿಬರುತ್ತಿವೆ. ಆದರೆ ಅಧಿಕೃತ ಮಾಹಿತಿ ಇನ್ನೂ ತಿಳಿದುಬಂದಿಲ್ಲ.
ಕಳೆದ ರಾಜ್ಯ ವಿಧಾನಸಭಾ ಚುನಾವಣೆಯ ನಂತರ ಜಿ. ಪರಮೇಶ್ವರ್ ಅವರಿಂದ ತೆರವಾದ ಕೆಪಿಸಿಸಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ 2018 ಜುಲೈ 4 ರಂದು ನೂತನ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು.
ಇತ್ತೀಚೆಗೆ ಕಾಂಗ್ರೆಸ್ ಪಕ್ಷದಲ್ಲಿ ಆಗುತ್ತಿರುವ ದಿಢೀರ್ ಬೆಳವಣೆಗೆಯಿಂದ ಬೇಸರಗೊಂಡಿದ್ದರು. ಇತ್ತೀಚೆಗೆ ಶಾಸಕ ರೋಷನ್ ಬೇಗ್ ದಿನೇಶ್ ಗುಂಡೂರಾವ್ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ದಿನೇಶ್ ರಾಜಿನಾಮೆ ಬಗ್ಗೆ ಇದುವರೆಗೂ ಯಾವುದೇ ಕಾಂಗ್ರೆಸ್ ನಾಯಕರು ಸ್ಪಷ್ಟನೆ ನೀಡಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


