ರಾಜಕೀಯ

ಬಿಎಂಟಿಸಿ ಬಸ್ ನಿಲ್ದಾಣ ಉದ್ಘಾಟನೆಗೆ ಬಚ್ಚೇಗೌಡರಿಗಿಲ್ಲ ಆಹ್ವಾನ: ಕಾರ್ಯಕರ್ತರ ಆಕ್ರೋಶ, ಅಸಮಾಧಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಬಿಎಂಟಿಸಿ ಬಸ್ ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮಕ್ಕೆ ಸಂಸದ ಬಿ.ಎನ್.ಬಚ್ಚೇಗೌಡ ಅವರನ್ನು ...

ಬಿಎಂಟಿಸಿ ಬಸ್ ನಿಲ್ದಾಣ ಉದ್ಘಾಟನೆಗೆ ಬಚ್ಚೇಗೌಡರಿಗಿಲ್ಲ ಆಹ್ವಾನ: ಕಾರ್ಯಕರ್ತರ ಆಕ್ರೋಶ, ಅಸಮಾಧಾನ
ಬಿಎಂಟಿಸಿ ಬಸ್ ನಿಲ್ದಾಣ ಉದ್ಘಾಟೆನೆಗೆ ಬಚ್ಚೇಗೌಡಗೆ ಆಹ್ವಾನವಿಲ್ಲ
Published On :
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಬಿಎಂಟಿಸಿ ಬಸ್ ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮಕ್ಕೆ ಸಂಸದ ಬಿ.ಎನ್.ಬಚ್ಚೇಗೌಡ ಅವರನ್ನು ಆಹ್ವಾನಿಸದೆ ಅವಮಾನಿಸಲಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಕಾರ್ಯಕ್ರಮ ತಡೆದು ಪ್ರತಿಭಟನೆ ನಡೆಸಿದರು.
ಸಚಿವ ಎಂಟಿಬಿ ನಾಗರಾಜ್ ಸಣ್ಣತನದ ರಾಜಕೀಯ ಮಾಡುತ್ತಿದ್ದಾರೆ. ಆಹ್ವಾನ ಪತ್ರಿಕೆಯಲ್ಲಿ ಕಾಟಾಚಾರಕ್ಕೆ ಹೆಸರು ಮುದ್ರಿಸಿ ಸಂಸದರಿಗೆ ಆಹ್ವಾನ ನೀಡದೆ ಅವಮಾನಿಸಿದ್ದಾರೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. 
ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಯತ್ನಿಸಿದರೂ, ಬ್ಯಾರಿಕೇಡ್‍ಗಳನ್ನು ತಳ್ಳಿಕೊಂಡು ಕಾರ್ಯಕ್ರಮ ಪ್ರವೇಶಿಸಿ ಆಕ್ರೋಶ ಹೊರಹಾಕಿದರು. 
ಸಮಾರಂಭದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಉಂಟಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.