ಬಿಗ್ ನ್ಯೂಸ್! ಕಾಂಗ್ರೆಸ್ ನಿಂದ ಶಾಸಕ ರೋಷನ್ ಬೇಗ್ ಸಸ್ಪೆಂಡ್
ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕ ಆರ್. ರೋಷನ್ ಬೇಗ್ ಅವರನ್ನು ಅಮಾನತು ಮಾಡಲಾಗಿದೆ.

Published On :
ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕ ಆರ್. ರೋಷನ್ ಬೇಗ್ ಅವರನ್ನು ಅಮಾನತು ಮಾಡಲಾಗಿದೆ.
ಶಿವಾಜಿನಗರ ಶಾಸಕರಾದ ಬೇಗ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಕಾರಣ ನೀಡಿ ಪಕ್ಷದಿಂದ ಅಮಾನತು ಮಾಡಲಾಗಿದೆ.
ಇತ್ತೀಚಿನ ದಿನಗಳಲ್ಲಿ ರೋಷನ್ ಬೇಗ್ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕೆಸಿ ವೇಣುಗೋಪಾಲ್ ಸೇರಿ ಹಲವರ ನಾಯಕತ್ವದ ಬಗೆಗೆ ಅಸಮಾಧಾನ ಹೊರಹಾಕಿದ್ದರು.

ಅಲ್ಲದೆ ರಾಜ್ಯಾದ್ಯಂತ ಸುದ್ದಿ ಮಾಡಿರುವ ಐಎಂಎ ವಂಚನೆ ಪ್ರಕರಣದ ಕುರಿತಂತೆಯೂ ಬೇಗ್ ಹೆಸರು ಮಾದ್ಯಮಗಳಲ್ಲಿ ಕೇಳಿ ಬಂದಿತ್ತು.
ಇದೀಗ ಪಕ್ಷದ ಪ್ರಧಾನ ಕಾರ್ಯದರ್ಶಿ ವಿ.ವೈ ಘೋರ್ಪಡೆ ಬೇಗ್ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಆದೇಶಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


