ಶಾಸಕ ರೋಷನ್ ಬೇಗ್ ಸುಳ್ಳುಗಾರ: ಐಎಂಎ ಪ್ರಕರಣದಲ್ಲಿ ನನ್ನನ್ನು ಎಳೆದು ತಂದಿದ್ದಾರೆ: ದೇಶಪಾಂಡೆ
ಐಎಂಎ ಹಗರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ, ಹೀಗಾಗಿ ನನ್ನನ್ನು ಅನಾವಶ್ಯಕವಾಗಿ ಎಳೆದು ತರಲಾಗುತ್ತಿದೆ ಎಂದು ಕಂದಾಯ ಸಚಿವ ...

Published On :
ಬೆಂಗಳೂರು: ಐಎಂಎ ಹಗರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ, ಹೀಗಾಗಿ ನನ್ನನ್ನು ಅನಾವಶ್ಯಕವಾಗಿ ಎಳೆದು ತರಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಆರೋಪಿಸಿದ್ದಾರೆ.
ತಿಂಗಳ ಹಿಂದೆ ಐಎಂಎ ಮಾಲೀಕ ಮೊಹಮ್ಮದ್ ಮನ್ಸೂರ್ ಖಾನ್‌ನನ್ನು ಶಾಸಕ ರೋಷನ್ ಬೇಗ್ ತಮ್ಮ ಬಳಿಗೆ ಕರೆತಂದು ವ್ಯವಹಾರದಲ್ಲಿ ಎದುರಾಗಿರುವ ಸಮಸ್ಯೆ ಪರಿಹಾರಕ್ಕೆ ನೆರವು ಬಯಸಿದ್ದು ನಿಜ ಎಂದು ಹೇಳಿದ್ದಾರೆ.
ನನ್ನ ಕ್ಷೇತ್ರದವರು. ಒಳ್ಳೇ ಜನ. ಚಾರಿಟಿ ಶಾಲೆ, ಆಸ್ಪತ್ರೆ, ಆಭರಣ ಮತ್ತು ಹಣಕಾಸು ವ್ಯವಹಾರ ನಡೆಸುತ್ತಿದ್ದಾರೆ. ಆರ್‌ಬಿಐ ಕೂಡ ತನಿಖೆ ನಡೆಸಿದ್ದು, ಎಲ್ಲವೂ ಸರಿ ಇದೆ. ಆದರೂ, ಪೊಲೀಸ್ ತನಿಖೆ ಕಾರಣ ಯಾವುದೇ ವ್ಯವಹಾರ ಆಗುತ್ತಿಲ್ಲ. ಈ ಸಣ್ಣ ಸಮಸ್ಯೆ ಬಗೆಹರಿಸಿಕೊಡಿ ಎಂದು ರೋಷನ್ ಬೇಗ್ ಕೇಳಿದ್ದರು. ತನಿಖೆ ವರದಿ ಬಳಿಕ ಕಾನೂನು ಪ್ರಕಾರ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ್ದೆ'' ಎಂದು ದೇಶಪಾಂಡೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


