ಮಧ್ಯಂತರ ಚುನಾವಣೆ ನಿಶ್ಚಿತ, ಕಾಂಗ್ರೆಸ್ ಹೈ ಕಮಾಂಡ್ ಶಕ್ತಿ ಕಳೆದುಕೊಂಡಿದೆ: ದೇವೇಗೌಡರ ಹೊಸ ಬಾಂಬ್
ರಾಜ್ಯ ಸಮ್ಮಿಶ್ರ ಸರ್ಕರದ ಬಗ್ಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ.

Published On :
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕರದ ಬಗ್ಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುವುದರಲ್ಲಿ ಸಂಶಯವೇ ಇಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ದೇವೇಗೌಡರು, ರಾಜ್ಯ ಮೈತ್ರಿ ಸರ್ಕಾರ ಎಷ್ಟು ದಿನ ಇರುತ್ತೊ ಗೊತ್ತಿಲ್ಲ, ರಾಜಕಾರಣದಲ್ಲಿ ಏಳು ಬೀಳು ಇದ್ದೇ ಇರುತ್ತದೆ, ಸರ್ಕಾರ ಉಳಿಸುವುದು ಬಿಡುವುದು ಕಾಂಗ್ರೆಸ್ ನಾಯಕರ ಕೈಯ್ಯಲ್ಲಿದೆ, ನನ್ನ ಜೊತೆ ಇದ್ದವರೆಲ್ಲ ಬಿಟ್ಟು ಹೋದರು, ಆದರರು ನಾನು ಧೃತಿ ಗೆಡದೇ ಮುಂದೆ ಬಂದಿದ್ದೇನೆ, ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಹೈ ಕಮಾಂಡ್ ಶಕ್ತಿ ಕಳೆದು ಕೊಂಡಿದೆ, ಆತುರ ಬಿದ್ದು ಕಾಂಗ್ರೆಸ್ ನಾಯಕರು ಸರ್ಕಾರ ರಚನೆಗೆ ಮುಂದೆ ಬಂದರು. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕೆಂಬ ಹಿನ್ನೆಲೆಯಲ್ಲಿ ಹಿಂದೆ-ಮುಂದೆ ಯೋಚಿಸದೇ ನಿಮ್ಮ ಮಗನನ್ನ ಸಿಎಂ ಮಾಡಿ ಎಂದು ಹೇಳಿದರು. 3/1 ನಿಯಮದಲ್ಲೂ ಅಧಿಕಾರ ಹಂಚಿಕೆ ಎಂದು ಹೇಳಿದರು, ಆದರೆ ನಮ್ಮ ಒಂದು ಸಚಿವ ಸ್ಥಾನವನ್ನು ಅವರೇ ಕಿತ್ತುಕೊಂಡಿದ್ದಾರೆ, ಈ ಬಗ್ಗೆ ನಾನು ಎಲ್ಲಾದರೂ ಮಾತನಾಡಿದ್ದೇನಾ, ಎಲ್ಲಾ ನೋವು ಸಹಿಸಿಕೊಂಡು ಬಂದಿದ್ದೇನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸೋತಿರುವ ಕ್ಷೇತ್ರಗಳನ್ನು ನಮಗೆ ಕೊಡಿ ಎಂದು ಕೇಳಿದೆವು, ಆದರೆ ಮೈಸೂರು ಉಳಿಸಿಕೊಳ್ಳಲು ತುಮಕೂರು ನಮಗೆ ನೀಡಿದರು, ಹಾಲಿ ಸಂಸದರಿರುವ ಕ್ಷೇತ್ರ ನಮಗೆ ಬೇಡ ಎಂದು ಹೇಳಿದ್ದೇವು ಆದರು ಅವರು ನಮ್ಮ ಮಾತು ಕೇಳಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್ಚುನಾವಣೆಸಮ್ಮಿಶ್ರ ಸರ್ಕಾರಜೆಡಿಎಸ್Electionಎಚ್.ಡಿ ದೇವೇಗೌಡH.D DevegowdaJds. Coalition Government
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


