'ನಿರ್ಧಾರದಿಂದ ಹಿಂದೆ ಸರಿಯಲ್ಲ, ರಾಜೀನಾಮೆ ಪತ್ರ ದೇವೇಗೌಡರ ಮುಂದಿದೆ, ಅವರ ತೀರ್ಮಾನಕ್ಕೆ ನಾನು ಬದ್ಧ'
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಸಂಸತ್ತಿನಲ್ಲಿ ಇರಬೇಕೆಂಬುದು ರಾಜ್ಯದ ಹಾಗೂ ನನ್ನ ಆಶಯ.ಚುನಾವಣೆ ಫಲಿತಾಂಶ ಬಂದ ದಿನವೇ ನನ್ನ ರಾಜೀನಾಮೆಯನ್ನು ಅವರ ಮುಂದಿಟ್ಟಿದ್ದೆ.

Published On :
ನವದೆಹಲಿ: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಸಂಸತ್ತಿನಲ್ಲಿ ಇರಬೇಕೆಂಬುದು ರಾಜ್ಯದ ಹಾಗೂ ನನ್ನ ಆಶಯ.ಚುನಾವಣೆ ಫಲಿತಾಂಶ ಬಂದ ದಿನವೇ ನನ್ನ ರಾಜೀನಾಮೆಯನ್ನು ಅವರ ಮುಂದಿಟ್ಟಿದ್ದೆ. ಅವರು ಯಾವಾಗ ಬೇಕಾದರು ಈ ಬಗ್ಗೆ ನಿರ್ಧಾರ ಕೈಗೊಳ್ಳಬಹುದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.
ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಸಮಸ್ಯೆಯಿಂದ ಸಂಸತ್ ಅಧಿವೇಶನಕ್ಕೆ ಗೈರಾಗಿದ್ದೆ. ವೈದ್ಯರು ವಿಶ್ರಾಂತಿ ಪಡೆಯಲು ಸಲಹೆ ನೀಡಿದ್ದರಿಂದ ಅಧಿವೇಶನಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ.
ಇಂದು ಪ್ರಮಾಣವಚನ ಸ್ವೀಕರಿಸಿದ್ದೇನೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ನನಗೆ ಪೈಪೋಟಿ ಇರಲಿಲ್ಲ. ಕ್ಷೇತ್ರದಲ್ಲಿ ಬಹಳ ಅಭಿವೃದ್ಧಿ ಕೆಲಸ ಮಾಡಿದ್ದರಿಂದ ನನಗೆ ಗೆಲುವು ಸಾಧ್ಯವಾಯಿತು ಎಂದು ಲೋಕಸಭಾ ಚುನಾವಣಾ ಗೆಲುವಿನ ರಹಸ್ಯವನ್ನು ಬಿಚ್ಚಿಟ್ಟರು,
ಪ್ರಜ್ವಲ್ ಪ್ರಮಾಣವಚನಕ್ಕೆ ತಂದೆ, ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ, ತಾಯಿ ಭವಾನಿ ರೇವಣ್ಣ, ಸಹೋದರ ಡಾ.ಸೂರಜ್ ರೇವಣ್ಣ ಸಾಕ್ಷಿಯಾದರು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹುಟ್ಟಿದ ಹರದನಹಳ್ಳಿಯಲ್ಲಿ ಈಶ್ವರ ದೇವಾಲಯ ಇದೆ, ಈ ದೇವರು ದೇವೇಗೌಡರ ಕುಟುಂಬದ ಮನೆ ದೇವರಾಗಿದೆ. ಹೀಗಾಗಿ ಪ್ರಜ್ವಲ್ ಮನೆ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


