ಹೆಸರಿನ ಮುಂದೆ 'ಗೌಡ' ಸೇರಿಸಿಕೊಂಡಿದ್ದಕ್ಕೆ ನಾನು ಸಿಎಂ ಹಾಗೂ ಕೇಂದ್ರ ಮಂತ್ರಿಯಾದೆ: ಡಿವಿಎಸ್
ಗೌಡ'ಎಂಬ ಹೆಸರು ಇದ್ದಿದ್ದಕ್ಕೆ ನನಗೆ ಮುಖ್ಯಮಂತ್ರಿ ಪದವಿ ಹಾಗೂ ಕೇಂದ್ರ ಮಂತ್ರಿ ಸ್ಥಾನ ಸಿಕ್ಕಿತ್ತು ಎಂದು ಹೇಳಿದ್ದಾರೆ..

Published On :
ಬೆಂಗಳೂರು: ನನ್ನ ಹೆಸರಿನೊಂದಿಗೆ ಗೌಡ ಎಂದು ಸೇರಿಸಿಕೊಂಡಿದ್ದಕ್ಕೆ ನಾನು ರಾಜ್ಯದ ಮುಖ್ಯಮಂತ್ರಿಯಾಗಿ, ಈಗ ಕೇಂದ್ರ ಸಚಿವನಾಗಿದ್ದೇನೆ. ಅದನ್ನು ಹೇಳಲು ನನಗೆ ಹಿಂಜರಿಕೆ, ನಾಚಿಕೆ ಇಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.
ಭಾರತ ಜ್ಞಾನಾಭಿವೃದ್ಧಿ ಟ್ರಸ್ಟ್ ಹಾಗೂ ಕೃಷಿಕ ಸಾಹಿತ್ಯಪರಿಷತ್ತು ಬೆಂಗಳೂರಿನ ಕನ್ನಡ ಸಾಹಿತ್ಯಪರಿಷತ್ತಿನಲ್ಲಿ ಆಯೋಜಿಸಿದ್ದ ‘ನಾಡಪ್ರಭು ಕೆಂಪೇಗೌಡ ಜಯಂತಿ’ ಹಾಗೂ ‘ಕೆಂಪೇಗೌಡರ ಯಲಹಂಕ ಸಂಸ್ಥಾನದ ಇತಿಹಾಸ ಮತ್ತು ಐತಿಹ್ಯದ ಬಗ್ಗೆ ವಿಚಾರ ಸಂಕಿರಣ’ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು 'ಗೌಡ'ಎಂಬ ಹೆಸರು ಇದ್ದಿದ್ದಕ್ಕೆ ನನಗೆ ಮುಖ್ಯಮಂತ್ರಿ ಪದವಿ ಹಾಗೂ ಕೇಂದ್ರ ಮಂತ್ರಿ ಸ್ಥಾನ ಸಿಕ್ಕಿತ್ತು ಎಂದು ಹೇಳಿದ್ದಾರೆ.
ನಾನೊಬ್ಬ ಗೌಡ ಎಂದು ಹೇಳಿಕೊಳ್ಳಲು ಹೆಮ್ಮೆ ಎನಿಸುತ್ತದೆ. ಮೊದಲ ಬಾರಿ ಚುನಾವಣೆಗೆ ಸ್ಪರ್ಧಿಸಿದಾಗ ಡಿ.ವಿ.ಸದಾನಂದ ಎಂದಿತ್ತು. ಆಗ ಸೋತಿದ್ದೆ. ಬಳಿಕ ಹೆಸರಿನ ಜತೆಗೆ 'ಗೌಡ' ಎಂದು ಸೇರಿಕೊಳ್ಳಲು ಕೆಲವರು ಸಲಹೆ ನೀಡಿದಾಗ ಡಿ.ವಿ.ಸದಾನಂದ ಗೌಡ ಎಂದು ಬದಲಾಯಿತು. ಆ ನಂತರದ ಚುನಾವಣೆಯಲ್ಲಿ ಗೆಲವು ಸಾಧಿಸಿದೆ. ರಾಜಕೀಯದಲ್ಲಿ ಇಷ್ಟು ಎತ್ತರಕ್ಕೆ ಬೆಳೆಯಲು ಸಮುದಾಯದ ಹೆಸರು ಕಾರಣವಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruChief Ministerಮುಖ್ಯಮಂತ್ರಿUnion Ministerಡಿ.ವಿ ಸದಾನಂದಗೌಡD.V Sadananda GowdaGowdaಗೌಡಕೇಂದ್ರ ಮಂತ್ರಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


