ಪ್ರದೇಶಾಭಿವೃದ್ಧಿ ಅನುದಾನ ಸದ್ಬಳಕೆಯಲ್ಲಿ ಶಾಸಕರ ನಿರಾಸಕ್ತಿ: ನಿಧಿಯಲ್ಲಿ ಕೊಳೆಯುತ್ತಿದೆ ನೂರಾರು ಕೋಟಿ !
ಪ್ರದೇಶಾಭಿವೃದ್ಧಿ ನಿಧಿಯ ಅನುದಾನ ಸದ್ಬಳಕೆಯಲ್ಲಿ ಮೈತ್ರಿ ಶಾಸಕರು ಹಿಂದುಳಿದಿದ್ದಾರೆ. ಶಾಸಕರ ನಿಧಿಯ ಕ್ಷೇತ್ರಾಭಿವೃದ್ಧಿ ಅನುದಾನ ಪಡೆಯಲು ಶಾಸಕರು ಆಸಕ್ತಿ ...

Published On :
ಬೆಂಗಳೂರು: ಪ್ರದೇಶಾಭಿವೃದ್ಧಿ ನಿಧಿಯ ಅನುದಾನ ಸದ್ಬಳಕೆಯಲ್ಲಿ ಮೈತ್ರಿ ಶಾಸಕರು ಹಿಂದುಳಿದಿದ್ದಾರೆ. ಶಾಸಕರ ನಿಧಿಯ ಕ್ಷೇತ್ರಾಭಿವೃದ್ಧಿ ಅನುದಾನ ಪಡೆಯಲು ಶಾಸಕರು ಆಸಕ್ತಿ ತೋರದಿರುವುದು ವಿಪರ್ಯಾಸವಾಗಿದೆ.
ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಪ್ರತಿ ವರ್ಷ ಅಭಿವೃದ್ಧಿ ಕೆಲಸಗಳಿಗಾಗಿ 2 ಕೋಟಿ ರು ವರೆಗೆ ಹಣ ಪಡೆಯಬಹುದಾಗಿದೆ, ಆದರೆ 31 ವಿಧಾನಸಭೆ ಸದಸ್ಯರು ಹಾಗೂ 36 ವಿಧಾನ ಪರಿಶತ್ ಸದಸ್ಯರು ಇದುವರೆಗೂ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ,
ಮಾಜಿ ಸಿಎಂ ಹಾಗೂ ಬಾದಾಮಿ ಶಾಸಕ ಸಿದ್ದರಾಮಯ್ಯ ಸೇರಿದಂತೆ ಇತರ ಶಾಸಕರು ಅನುದಾನ ಹಣವನ್ನು ಪೂರ್ಣವಾಗಿ ಬಳಸಿಕೊಂಡಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಸಿಎಂ ಪತ್ರದ ಪ್ರಕಾರ, ಬಾದಾಮಿ ಶಾಸಕ ಸಿದ್ದರಾಮಯ್ಯ ಅವರು ಐದು ಅಭಿವೃದ್ದಿ ಕೆಲಸಗಳಿಗಾಗಿ 22 ಲಕ್ಷ ರು ಪ್ರಸ್ತಾವನೆ ಸಲ್ಲಿಸಿದ್ದರು, ಅವರು 2 ಕೋಟಿ ರು ವರೆಗೆ ಅನುದಾನ ಪಡೆದುಕೊಳ್ಳಬಹುದಾಗಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿಗಳು ಪತ್ರ ಬರೆದಿದ್ದು ಪ್ರದೇಶಾಭಿವೃದ್ಧಿ ಹಣ ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕರಿಗೆ ತಿಳಿಸಿದ್ದಾರೆಹೀಗಾಗಿ ಶಾಸಕರ ನಿಧಿಯಲ್ಲಿ ನೂರಾರು ಕೋಟಿ ಹಣ ಕೊಳೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


