ಶಾಸಕ ಭೀಮಾನಾಯ್ಕ್ ಗೆ ಕೆಪಿಸಿಸಿ ನೊಟೀಸ್
ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯಕ್ ಗೆ ಕೆಪಿಸಿಸಿ ನೊಟೀಸ್ ಜಾರಿ ಮಾಡಿದೆ.

Published On :
ಬೆಂಗಳೂರು: ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯಕ್ ಗೆ ಕೆಪಿಸಿಸಿ ನೊಟೀಸ್ ಜಾರಿ ಮಾಡಿದೆ.
ಜೂನ್ 26 ರಂದು ಹಗರಿಬೊಮ್ಮನಹಳ್ಳಿಯಲ್ಲಿ ಸಾರ್ವಜನಿಕರ ಮುಂದೆ ಸ್ವಪಕ್ಷದ ಸಚಿವ ಪಿ.ಟಿ.ಪರಮೇಶ್ವರ್ ನಾಯ್ಕ್ ವಿರುದ್ಧ ಆಕ್ರೋಶ ಹೊರಹಾಕಿದ್ದ ಭೀಮಾ ನಾಯ್ಕ್, ಹಗರಿಬೊಮ್ಮನಹಳ್ಳಿಯ ಮಾಲವಿ ಜಲಾಶಯಕ್ಕೆ ರಾಜವಾಳ ಬಳಿ ಇಂಟೇಕ್ ಚಾನೆಲ್ ನಿರ್ಮಿಸಲು ಸಚಿವರು ಅಡ್ಡಪಡಿಸುತ್ತಿದ್ದಾರೆ. ಕಮಿಷನ್ ಆಸೆಗೆ ಏನು ಬೇಕಾದರೂ ಮಾಡಲು ಸಿದ್ಧರಿರುವ ಪರಮೇಶ್ವರ್ ನಾಯ್ಕ್, ಒಬ್ಬ ನಾಲಾಯಕ್ ಸಚಿವ ಎಂದು ತಮ್ಮದೇ ಪಕ್ಷದ ಸಚಿವರ ವಿರುದ್ಧ ಟೀಕಾ ಪ್ರಹಾರ ಮಾಡಿದ್ದರು.
ಈ ಸಂಬಂಧ ಭೀಮಾನಾಯ್ಕ್ ಗೆ ಗುರುವಾರ ನೋಟಿಸ್ ನೀಡಿರುವ ಕೆಪಿಸಿಸಿ, ಸಚಿವರ ವಿರುದ್ಧದ ಹೇಳಿಕೆಯನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು ಗಂಭೀರವಾಗಿ ಪರಿಗಣಿಸಿದೆ. ಪಕ್ಷದ ತತ್ವ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದುಕೊಂಡು ಬಹಿರಂಗ ಹೇಳಿಕೆಗಳನ್ನು ನೀಡಿದ್ದನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸಿ ಕ್ರಮಕೈಗೊಳ್ಳಲು ಪಕ್ಷ ಚಿಂತನೆ ನಡೆಸಿದೆ. ಹೀಗಾಗಿ ತಮ್ಮ ಹೇಳಿಕೆ ಕುರಿತು ಒಂದು ವಾರದೊಳಗೆ ಸಮಜಾಯಿಷಿ ನೀಡುವಂತೆ ನೊಟೀಸ್ ನಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


