ಮಧ್ಯಂತರ ಚುನಾವಣೆಗೆ ತಾಲೀಮು: ದಲಿತ ಶಾಸಕ ಎಚ್.ಕೆ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆ?
ಎಚ್.ವಿಶ್ವನಾಥ್ ರಾಜಿನಾಮೆಯಿಂದ ತೆರವಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನು ಶಾಸಕ ಹೆಚ್.ಕೆ.ಕುಮಾರಸ್ವಾಮಿಗೆ ನೀಡಲಾಗುತ್ತದೆ ಎಂಬ ಮಾತು ಕೇಳಿ ...

Published On :
ಬೆಂಗಳೂರು: ಎಚ್.ವಿಶ್ವನಾಥ್ ರಾಜಿನಾಮೆಯಿಂದ ತೆರವಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನು ಶಾಸಕ ಹೆಚ್.ಕೆ.ಕುಮಾರಸ್ವಾಮಿಗೆ ನೀಡಲಾಗುತ್ತದೆ ಎಂಬ ಮಾತು ಕೇಳಿ ಬರುತ್ತಿವೆ.
ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹಾಲಿ ಶಾಸಕ ಹಾಗೂ ದಲಿತ ಮುಖಂಡರಿಗೆ ಮಣೆ ಹಾಕಲು ನಿರ್ಧರಿಸಿರುವ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಸಕಲೇಶಪುರ ಶಾಸಕ ಹೆಚ್.ಕೆ.ಕುಮಾರಸ್ವಾಮಿಗೆ ಆಫರ್ ನೀಡಿದ್ದಾರೆ.
ಇಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹಿಂದುಳಿದ ವರ್ಗಗಳ ಮುಖಂಡರ ಸಭೆ ನಡೆಸಿದ್ದಾರೆ ಸಭೆಯಲ್ಲಿ ಈ ಬಗ್ಗೆ ಬಿ.ಬಿ.ನಿಂಗಯ್ಯ, ಬಿಎಂ ಫಾರೂಕ್, ಮಧು ಬಂಗಾರಪ್ಪರ ಚರ್ಚೆ ನಡೆಸಿದ್ದು, ದಲಿತಕೋಟಾದಲ್ಲಿ ಹೆಚ್.ಕೆ.ಕುಮಾರಸ್ವಾಮಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡುವಂತೆ ತಿಳಿಸಿದ್ದಾರೆ ಎಂದು ಹೇಳಲಾಗಿದೆ,.
ವಿಶ್ವನಾಥ್ ರಾಜೀನಾಮೆ ಅಂಗೀಕರಿಸದ ಹೆಚ್.ಡಿ.ದೇವೇಗೌಡರು, ಆ ಸ್ಥಾನವನ್ನು ವಿಶ್ವನಾಥ್‌ರಿಂದಲೇ ಬೇರೆಯವರಿಗೆ ವರ್ಗಾಯಿಸುತ್ತೇನೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಶಾಸಕMLAಎಚ್.ಡಿ ದೇವೇಗೌಡH.D Devegowdaಜೆಡಿಎಸ್ ರಾಜ್ಯಾಧ್ಯಕ್ಷJDs PresidentH.K Kumaraswamyಎಚ್.ಕೆ ಕುಮಾರಸ್ವಾಮಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


