ಸರ್ಕಾರಕ್ಕೆ ಕನ್ನಡ ಶಾಲೆಗಳ ಬಗ್ಗೆ ಕಾಳಜಿ ಇಲ್ಲ, ಆಂಗ್ಲಮಾಧ್ಯಮ ಶಾಲೆ ಕೈಬಿಡಿ: ಹೊರಟ್ಟಿ
ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಆಂಗ್ಲ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಿರುವುದಕ್ಕೆ ಸ್ವಪಕ್ಷ ನಾಯಕ ಮೇಲ್ಮನೆ ಜೆಡಿಎಸ್...

Published On :
ಧಾರವಾಡ: ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಆಂಗ್ಲ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಿರುವುದಕ್ಕೆ ಸ್ವಪಕ್ಷ ನಾಯಕ ಮೇಲ್ಮನೆ ಜೆಡಿಎಸ್ ಸದಸ್ಯ ಬಸವರಾಜ ಹೊರಟ್ಟಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಲ್ಲಿನ ರಾಜ್ಯ ಮಟ್ಟದ ಕನ್ನಡ ಭೋಧಕರ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರಕ್ಕೆ ಕನ್ನಡ ಭಾಷೆ, ಕನ್ನಡ ಶಾಲೆಗಳ ಬಗ್ಗೆ ಕಾಳಜಿ ಇಲ್ಲ. ಸರ್ಕಾರ ಆಂಗ್ಲಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಿರುವುದರಿಂದ ಮಾತೃಭಾಷೆಯನ್ನು ಕಡೆಗಣಿಸಿದಂತಾಗುತ್ತದೆ. ಹೀಗಾಗಿ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭವನ್ನು ಕೈಬಿಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿರುವುದಾಗಿ ತಿಳಿಸಿದರು.
ಈ ವೇಳೆ ಮಾತನಾಡಿದ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು, ಸಚಿವಾಕಾಂಕ್ಷಿಯಾಗಿರುವ ಬಸವರಾಜ್ ಹೊರಟ್ಟಿಯವರು ಮೈತ್ರಿ ಸರ್ಕಾರದಲ್ಲಿ ಸಚಿವರಾಗಲು ಸಾಧ್ಯವಿಲ್ಲ. ಹೊರಟ್ಟಿಯವರು ಕನ್ನಡ ಮಾಧ‍್ಯಮ ಬಗ್ಗೆ ನೆಲ ಜಲ ಭಾಷೆ ಬಗ್ಗೆ ಅಭಿಮಾನ ಹೊಂದಿದ್ದಾರೆ. ಹೊರಟ್ಟಿಯಂತವರು ಈ ಸರ್ಕಾರಕ್ಕೆ ಅಗತ್ಯವಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


