ರಾಜಕೀಯ

'ಕೆಲಸ ಮಾಡೋರಿಗೆ ವೋಟ್ ಕೊಡಿ, ನಿದ್ದೆ ಮಾಡೋರಿಗೆ ಮತ ಹಾಕಬೇಡಿ ಎಂದಿದ್ರಿ, ಜನ ಅದನ್ನೆ ಮಾಡವ್ರೇ'

ಕೆಲಸ ಮಾಡುವವರಿಗೆ ವೋಟ್ ಹಾಕಿ, ನಿದ್ದೆ ಮಾಡುವವರಿಗೆ ವೋಟ್ ಹಾಕ್ಬೇಡಿ ಎಂದು ಸಿದ್ದರಾಮಯ್ಯ ಹೇಳಿದ್ದರು, ಅದರಂತೆ ಜನ ಅವರಿಗೆ ತಕ್ಕ ಉತ್ತರ ...

'ಕೆಲಸ ಮಾಡೋರಿಗೆ ವೋಟ್ ಕೊಡಿ, ನಿದ್ದೆ ಮಾಡೋರಿಗೆ ಮತ ಹಾಕಬೇಡಿ ಎಂದಿದ್ರಿ, ಜನ ಅದನ್ನೆ ಮಾಡವ್ರೇ'
ಕೆ.ಎಸ್ ಈಶ್ವರಪ್ಪ ಮತ್ತು ಸಿದ್ದರಾಮಯ್ಯ
Published On :
ಬಾಗಲಕೋಟೆ: ಕೆಲಸ ಮಾಡುವವರಿಗೆ ವೋಟ್ ಹಾಕಿ, ನಿದ್ದೆ ಮಾಡುವವರಿಗೆ ವೋಟ್ ಹಾಕ್ಬೇಡಿ ಎಂದು ಸಿದ್ದರಾಮಯ್ಯ ಹೇಳಿದ್ದರು, ಅದರಂತೆ ಜನ ಅವರಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದು ಮಾಜಿ ಡಿಸಿಎಂ ಈಶ್ವರಪ್ಪ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಈಶ್ವರಪ್ಪ, ಸಿದ್ದರಾಮಯ್ಯ ಅವರ ಮಾತಿನಂತೆ ಜನ ಕೆಲಸಗಾರ ಮೋದಿಯನ್ನು ಗೆಲ್ಲಿಸಿದ್ದಾರೆ. ನಿದ್ದೆ ಮಾಡುವ ಸಿದ್ದರಾಮಯ್ಯನನ್ನು ಮನೆಗೆ ಕಳಿಸಿದ್ದಾರೆ. ಸಿದ್ದರಾಮಯ್ಯ ನಿದ್ದೆರಾಮಯ್ಯ, ಐದು ವರ್ಷ ನಿದ್ದೆ ಮಾಡಿದರು ಎಂದು ವ್ಯಂಗ್ಯವಾಡಿದ್ದಾರೆ.
ಮೊಟ್ಟೆ ,ಶೂ, ಹಾಲು, ಅಕ್ಕಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ಜೇಬಿನ ಹಣದಿಂದ ಕೊಟ್ಟಿದ್ದಾರಾ ಎಂದು ಪ್ರಶ್ನಿಸಿದ ಅವರು, ಅನ್ನಭಾಗ್ಯ ಯೋಜನೆಗೆ ಮೋದಿ ಸರ್ಕಾರ ಪ್ರತಿ ಕೆ.ಜಿ ಅಕ್ಕಿಗೆ 28ರೂ ಕೊಡುತ್ತೆ. ಇದನ್ನು ಸಿದ್ದರಾಮಯ್ಯ ರಾಜ್ಯದ ಜನಕ್ಕೆ ಸ್ಪಷ್ಟ ಪಡಿಸಲಿ ಎಂದು ಹೇಳಿದ್ದಾರೆ.
ಅಕ್ಕಿ ಕೊಟ್ಟು ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದೀರಿ, ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಒಂದು, ಜೆಡಿಎಸ್ ಗೆ ಒಂದು ಹಾಗೂ ನಿಮಗೂ ಒಂದು ನಾಮ ಹಾಕಿದ್ದಾರೆ, ಅಧಿಕಾರಕ್ಕಾಗಿ ನೀವು ಸೆರಗು ಹಿಡಿದುಕೊಂಡು ಓಡಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.