ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ಸ್ಪರ್ಧೆ ಖಚಿತ: ಭವಾನಿ ರೇವಣ್ಣ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪುತ್ರ ಹಾಸನ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತ ಎಂದು ಭವಾನಿ ರೇವಣ್ಣ ಹೇಳಿದ್ದಾರೆ.

Published On :
ಹಾಸನ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪುತ್ರ ಹಾಸನ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತ ಎಂದು ಭವಾನಿ ರೇವಣ್ಣ ಹೇಳಿದ್ದಾರೆ.
ಹಾಸನದಲ್ಲಿ ಜಿಲ್ಲಾ ಯೂತ್ ಕ್ರಿಶ್ಚಿಯನ್ ಘಟಕ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಜವಾಬ್ದಾರಿ ತೆಗೆದುಕೊಳ್ಳಲು ಪ್ರಜ್ವಲ್ ಸಮರ್ಥನಾಗಿದ್ದಾರೆ, ಹೀಗಾಗಿ ಹಾಸನ ಜನತೆ ಅವರನ್ನು ಬೆಂಬಲಿಸುತ್ತಾರೆ ಎಂದು ಹೇಳಿದ್ದಾರೆ,.
ತಮ್ಮ ಮಾವ ಮಾಜಿ ಪ್ರಧಾನಿ ದೇವೇಗೌಡರು ಪ್ರಜ್ವಲ್ ಗೆ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ, ತಂದೆ ರೇವಣ್ಣ, ಚಿಕ್ಕಪ್ಪ ಕುಮಾರಸ್ವಾಮಿಸ ಹಾಗೂ ತಾತ ದೇವೇಗೌಡರಿಂದ ಪ್ರಜ್ವಲ್ ರಾಜಕೀಯದ ಪಟ್ಟುಗಳನ್ನು ಕರಗತ ಮಾಡಿಕೊಂಡಿದ್ದಾರೆ, ಜನರ ಹೃದಯ ಗೆದ್ದಿರುವ ಪ್ರಜ್ವಲ್ ರಾಜಕೀಯ ಪ್ರವೇಶ ಬಯಸಿದ್ದಾರೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


