ಭಾರತವನ್ನು ಪಾಕಿಸ್ತಾನದಂತೆ ಮೂಲಭೂತವಾದಿಗಳ ದೇಶವನ್ನಾಗಿಸಲು ಬಿಜೆಪಿ ಹೊರಟಿದೆ: ದಿನೇಶ್
ಭಾರತವನ್ನು ಪಾಕಿಸ್ತಾನದಂತೆ ಮೂಲಭೂತವಾದಿಗಳ ದೇಶವನ್ನಾಗಿಸಲು ಬಿಜೆಪಿ ಹೊರಟಿ ದ್ದಾರೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್...

Published On :
ಬೆಂಗಳೂರು: ಭಾರತವನ್ನು ಪಾಕಿಸ್ತಾನದಂತೆ ಮೂಲಭೂತವಾದಿಗಳ ದೇಶವನ್ನಾಗಿಸಲು ಬಿಜೆಪಿ ಹೊರಟಿ ದ್ದಾರೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್
ಆರೋಪಿಸಿದ್ದಾರೆ.
ಪಕ್ಷದ ಕಾನೂನು ಘಟಕ ಶನಿವಾರ ಏರ್ಪಡಿಸಿದ್ದ ಲೋಕಸಭಾ ಚುನಾವಣಾ ಚಿಂತನಾ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಕೋಮುವಾದಿ ಸರ್ಕಾರ ಅಧಿಕಾರದಲ್ಲಿದೆ. ಭಾರತವನ್ನು ಪಾಕಿಸ್ತಾನದಂತೆ ಮೂಲಭೂತವಾದಿಗಳ ದೇಶ ಮಾಡಲು ಮುಂದಾಗಿದ್ದು, ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಹೊರಟಿದ್ದಾರೆಂದು ಆರೋಪಿಸಿದರು.
ಜೈ ಶ್ರೀರಾಮ ಎಂದು ದೇವರ ಹೆಸರಲ್ಲಿ ಜನರನ್ನು ಕೊಲ್ಲುತ್ತಾರೆ. ಗೌರಿ ಲಂಕೇಶ್, ಎಂ.ಎಂ.ಕಲಬುರ್ಗಿ, ಗೋವಿಂದ್ ಪನ್ಸಾರೆ ಅವರನ್ನು ಕೊಲೆ ಮಾಡಿದವರು ಯಾರು? ಇಂತಹುದೇ ಆಹಾರ ತಿನ್ನಬೇಕು. ಇದನ್ನೇ ಆಚರಿಸಬೇಕು ಎನ್ನುವ ಮನಸ್ಥಿತಿ ನಿರ್ಮಾಣವಾಗುತ್ತಿದೆ. ದೇಶದ ಜನರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ..
ಕೇಂದ್ರ ಸರ್ಕಾರದ ಬಗ್ಗೆ ಯಾರಾದರೂ ಧ್ವನಿ ಎತ್ತಿದರೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಅಲ್ಲದೇ ದೇಶ ದ್ರೋಹಿ ಪಟ್ಟ ಕಟ್ಟಲಾಗುತ್ತಿದೆ. ದೇಶದಲ್ಲಿ ಬಲಪಂಥೀಯ ಚಿಂತನೆ ಬಲವಾಗುತ್ತಿದ್ದು,ಎಲ್ಲರನ್ನೂ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ ಎಂದು ಕಿಡಿಕಾರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


