ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿಯಿದ್ದರೇ ನಿಖಿಲ್ ಮಂಡ್ಯದಿಂದ ನಿಲ್ಲಲ್ಲಿ: ದೇವೇಗೌಡ
ಮಂಡ್ಯ ಕ್ಷೇತ್ರದಲ್ಲಿ ಮೊಮ್ಮಗ ನಿಖಿಲ್ ಸ್ಪರ್ಧಿಸಬೇಕೆಂದು ಅಭಿಮಾನಿಗಳು ಆಸೆ ಪಡುತ್ತಿದ್ದಾರೆ. ಆದರೆ ನಿಖಿಲ್ ಗೆ ಈಗಲೇ ಚುಣಾವಣಾ ಸ್ಪರ್ಧೆಯ ಬಗ್ಗೆ ಆಸಕ್ತಿಯಿಲ್ಲ. ...

Published On :
ಮಂಗಳೂರು: ಮಂಡ್ಯ ಕ್ಷೇತ್ರದಲ್ಲಿ ಮೊಮ್ಮಗ ನಿಖಿಲ್ ಸ್ಪರ್ಧಿಸಬೇಕೆಂದು ಅಭಿಮಾನಿಗಳು ಆಸೆ ಪಡುತ್ತಿದ್ದಾರೆ. ಆದರೆ ನಿಖಿಲ್ ಗೆ ಈಗಲೇ ಚುಣಾವಣಾ ಸ್ಪರ್ಧೆಯ ಬಗ್ಗೆ ಆಸಕ್ತಿಯಿಲ್ಲ. ಎರಡು ವರ್ಷ ರಾಜಕೀಯ ಬೇಡ ಎನ್ನುತ್ತಿದ್ದಾನೆ. ಆದರೆ ಅಭಿಮಾನಿಗಳು ಒತ್ತಾಯ ಮಾಡುತ್ತಾರೆಂದರೆ ನಿಖಿಲ್ ಗೆ ಸ್ಪರ್ಧೆ ಮಾಡು ಎಂದು ನಾನೇ ಹೇಳಿದ್ದೇನೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಹೆಚ್.ಡಿ.ದೇವೇಗೌಡ, ಸುಮಲತಾ ಅವರು ಸ್ಪರ್ಧಿಸಲು ಅಪೇಕ್ಷೆ ಪಡುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಮಂಡ್ಯ ಕ್ಷೇತ್ರ ಜೆಡಿಎಸ್ ನ ಕ್ಷೇತ್ರ ಎಂದು ಪರೋಕ್ಷವಾಗಿ ಸುಮಲತಾ ಅವರಿಗೆ ಟಾಂಗ್ ನೀಡಿದರು.
ಪ್ರಜ್ವಲ್ ರೇವಣ್ಣನಿಗೆ ಹಾಸನದಲ್ಲಿ ಸ್ಪರ್ಧಿಸುವಂತೆ ನಾನೇ ಖುದ್ದಾಗಿ ಹೇಳಿದ್ದೇನೆ. ಈ ಬಗ್ಗೆ ಕಾರ್ಯಕರ್ತರನ್ನು ಕರೆಸಿ ಮಾತನಾಡಿದ್ದೇನೆ. ಇನ್ನು ನಿಖಿಲ್ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದ ಆಕಾಂಕ್ಷಿ. ಅಲ್ಲಿನ ಪಕ್ಷದ ಮುಖಂಡರು ಕೂಡಾ ನಿಖಿಲ್ ಸ್ಪರ್ಧೆಗೆ ಒಲವು ತೋರುತ್ತಿದ್ದಾರೆ ಎಂದು ಹೇಳುವ ಮೂಲಕ ಇವರಿಬ್ಬರ ಸ್ಪರ್ಧೆಗೆ ಪರೋಕ್ಷ ಒಲವು ತೋರಿದ್ದಾರೆ ಎಂದು ಹೇಳಿದ್ದಾರೆ.
ಮಂಡ್ಯದಲ್ಲಿ ಸ್ಪರ್ಧಿಸಲು ಉತ್ಸುಕರಾಗಿರುವ ಸುಮಲತಾ ಅಂಬರೀಶ್ ಅವರನ್ನೇ ಜೆಡಿಎಸ್‌ಗೆ ಕರೆತಂದು ಟಿಕೆಟ್ ಕೊಡಿಸಬಹುದಲ್ಲವೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಜೆಡಿಎಸ್‌ನಿಂದ ಮಂಡ್ಯದಲ್ಲಿ ಸ್ಪರ್ಧಿಸಲು ಈಗಾಗಲೇ ನಿಖಿಲ್ ಮನಸ್ಸು ಮಾಡಿದ್ದಾರೆ. ನಮ್ಮಲ್ಲಿ ಬೇರೆಯವರೂ ಸ್ಪರ್ಧೆಗೆ ಒಲವು ತೋರಿದ್ದಾರೆ. ಹಾಗಿರುವಾಗ ಸುಮಲತಾ ಅವರನ್ನು ಜೆಡಿಎಸ್‌ಗೆ ಕರೆತಂದು ಟಿಕೆಟ್ ಕೊಡಿಸುವ ಬಗ್ಗೆ ಯಾವುದೇ ಪ್ರಯತ್ನ ನಡೆದಿಲ್ಲ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


