ಸುತ್ತೂರು ಮಠಕ್ಕೆ ಸುಮಲತಾ ಭೇಟಿ: ಮಂಡ್ಯದಿಂದಲೇ ಕಾಂಗ್ರೆಸ್ ಟಿಕೆಟ್ ನಿಂದ್ ಸ್ಪರ್ಧಿಸುವ ವಿಶ್ವಾಸ!
ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಣಕ್ಕಿಳಿಯಲು ಮುಂದಾಗಿರುವ ನಟಿ ಸುಮಲತಾ ಅಂಬರೀಷ್ ಅವರು ಶನಿವಾರ ಸುತ್ತೂರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಸ್ವಾಮೀಜಿ

Published On :
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಣಕ್ಕಿಳಿಯಲು ಮುಂದಾಗಿರುವ ನಟಿ ಸುಮಲತಾ ಅಂಬರೀಷ್ ಅವರು ಶನಿವಾರ ಸುತ್ತೂರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆದ ಬಳಿಕ ಸ್ವಾಮೀಜಿಯವರೊಂದಿಗೆ ಉಭಯಕುಶಲೋಪರಿ ನಡೆಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ''ಸ್ವಾಮೀಜಿಯವರು ನಮ್ಮ ಕುಟುಂಬಕ್ಕೆ ಮೊದಲಿನಿಂದಲೂ ಪರಿಚಯ. ಹೀಗಾಗಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ. ಪುತ್ರ ಅಭಿಷೇಕ್ ಸಿನಿಮಾದ ಟೀಸರ್ ತೋರಿಸಿ ಆಶೀರ್ವಾದ ಪಡೆದರು,
''ಪ್ರಸ್ತುತ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆಯೂ ಚರ್ಚೆ ನಡೆಸಿದ್ದು, ಜನರ ಅಭಿಪ್ರಾಯ ಸಂಗ್ರಹಿಸಲು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿದ್ದೇನೆ. ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ದೊರೆಯಲಿದ್ದು, ಮಂಡ್ಯದಿಂದ ಸ್ಪರ್ಧಿಸುವ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ನಟ ಅಂಬರೀಶ್ ಅವರು ಬದುಕಿದ್ದಾಗ ಗೌರವ ಕೊಡುತ್ತಿದ್ದ ಕೆಲವರು ಈಗ ವ್ಯತಿರಿಕ್ತವಾಗಿ ಮಾತನಾಡುತ್ತಿದ್ದಾರೆ. ಅವರು ಮಾತನಾಡುವುದು ನಮಗೆ ಹೆಚ್ಚು ಧೈರ್ಯ ತರುತ್ತಿದೆ. ಕಾರಣ ಎಲ್ಲದಕ್ಕೂ ಜನ ಉತ್ತರ ಕೊಡುತ್ತಾರೆ ಎಂದು ನಟ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಹೇಳಿದ್ದಾರೆ. ಅಂಬರೀಶ್ ಅವರು ಬದುಕಿದ್ದಾಗ ಒಂದು ರೀತಿ ಆದರೆ, ಇಂದು ಪರಿಸ್ಥಿತಿ ಬೇರೆ. ಅವರು ಬದುಕಿದ್ದಾಗ ಅವರ ಮುಂದೆ ಮಾತನಾಡಲು ಆಗದಿದ್ದವರು ಈಗ ಏನೇನೋ ಮಾತನಾಡುತ್ತಿದ್ದಾರೆ, ಎಂದು ಬೇಸರ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಸುತ್ತೂರು ಮಠSumalatha AmbareeshShivarathri DeshikendraSutturmuttLok sbaha electionಸುಮಲತಾ ಅಂಬರೀಷ್. ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


