ರಾಜಕೀಯ

ಮಂಡ್ಯಕ್ಕಾಗಿ ಸುಮಲತಾ ಪಟ್ಟು: ಅಂದುಕೊಂಡಷ್ಟು ಸುಲಭವಾಗಿಲ್ಲ ನಿಖಿಲ್ ರಾಜಕೀಯ ಪ್ರವೇಶ!

: ಮಂಡ್ಯ ಲೋಕಸಭೆ ಕ್ಷೇತ್ರದಿಂದ ರಾಜಕೀಯ ಪ್ರವೇಶ ಮಾಡಬೇಕೆಂದು ಬಹಳ ಆಸೆ ಇಟ್ಟುಕೊಂಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರ್ ಗೆ ..

ಮಂಡ್ಯಕ್ಕಾಗಿ ಸುಮಲತಾ ಪಟ್ಟು: ಅಂದುಕೊಂಡಷ್ಟು ಸುಲಭವಾಗಿಲ್ಲ ನಿಖಿಲ್ ರಾಜಕೀಯ ಪ್ರವೇಶ!
ಸುಮಲತಾ ಮತ್ತು ನಿಖಿಲ್ ಕುಮಾರ್
Published On :
ಮೈಸೂರು: ಮಂಡ್ಯ ಲೋಕಸಭೆ ಕ್ಷೇತ್ರದಿಂದ ರಾಜಕೀಯ ಪ್ರವೇಶ ಮಾಡಬೇಕೆಂದು ಬಹಳ ಆಸೆ ಇಟ್ಟುಕೊಂಡಿದ್ದ  ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರ್ ಗೆ ಹಿರಿಯ ನಟಿ ಸುಮಲತಾ ಅಂಬರೀಷ್ ದೊಡ್ಡ ತೊಡಕಾಗಿದ್ದಾರೆ. 
ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ನಿಖಿಲ್  ಕುಮಾರ್ ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬುದು ಮಂಡ್ಯ ಜೆಡಿಎಸ್ ಕಾರ್ಯಕರ್ತರ ಮಹತ್ವದ ಬೇಡಿಕೆಯಾಗಿದೆ, ಆದರೆ ಅನುಕಂಪದ ಅಲೆ ಮೇಲೆ ಸ್ಪರ್ಧಿಸಲು ಪಣ ತೊಟ್ಟು ನಿಂತಿದ್ದಾರೆ.
ಮಂಡ್ಯ ಲೋಕಸಭೆ ಕ್ಷೇತ್ರದ ಎಲ್ಲಾ ವಿಧಾನಸಭೆ ಕ್ಷೇತ್ರಗಳಲ್ಲೂ  ಜೆಡಿಎಸ್ ಶಾಸಕರೇ ಇರುವುದರಿಂದ, ಮಂಡ್ಯದಿಂದ ಸ್ಪರ್ಧಿಸಿದರೇ ಗೆಲುವು ಶತಃಸಿದ್ದ ಎಂದು ಗೌಡರ ಕುಟುಂಬ ನಂಬಿದೆ. ಹೀಗಾಗಿ ಮಂಡ್ಯ ಕ್ಷೇತ್ರ ಬಿಟ್ಟುಕೊಡಲು ಜೆಡಿಎಸ್ ಹಿಂಜರಿಯುತ್ತದೆ.
ಮಂಡ್ಯದಲ್ಲಿ ನಿಖಿಲ್ ಕುಮಾರ್ ಸ್ಪರ್ಧೆ ಬಗ್ಗೆ ಸುಮಲತಾ ತಲೆ ಕೆಡಿಸಿಕೊಂಡಿಲ್ಲ, ಹೇಗಾದರಾಗಲಿ, ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಲಿ, ನೀಡದರಲಿ ಪಕ್ಷೇತರವಾಗಾದರೂ ಮಂಡ್ಯ ದಿಂದಲೇ ಕಣಕ್ಕಿಳಿಯಬೇಕೆಂದು ಸುಮಲತಾ ಪಟ್ಟು ಹಿಡಿದಿದ್ದಾರೆ. ಮೈತ್ರಿ ಸರ್ಕಾರದ ಅಂಗ ಪಕ್ಷವಾದ ಜೆಡಿಎಸ್ ಗೆ  ಮಂಡ್ಯ ಬಿಟ್ಟುಕೊಡಲು ಕಾಂಗ್ರೆಸ್ ನಿರ್ದರಿಸಿತ್ತು, ಆದರೆ ಮಂಡ್ಯದಿಂದಲೇ ಸ್ಪರ್ಧಿಸಬೇಕೆಂದು ಸುಮಲತಾ ಹಠ ಹಿಡಿದಿರುವುದರಿಂದ ಜೆಡಿಎಸ್ ಗೆ ನುಂಗಲಾರದ ತುತ್ತಾಗಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.