'ಕೈ' ಕೊಟ್ಟ ಕಾಂಗ್ರೆಸ್: ಮಂಡ್ಯ ಕ್ಷೇತ್ರ ಸುಮಲತಾಗೆ ಬಿಟ್ಟುಕೊಡಲು ಸಾಧ್ಯವಿಲ್ಲ- ಸಿದ್ದರಾಮಯ್ಯ
ಮಂಡ್ಯ ಕ್ಷೇತ್ರದಿಂದ ಸುಮಲತಾ ಅಂಬರೀಷ್ ಅವರಿಗೆ ಟಿಕೆಟ್ ಕೊಡಲು ಸಾಧ್ಯವಿಲ್ಲ, ಈಗಾಗಲೇ ಮಂಡ್ಯದಲ್ಲಿ ಜೆಡಿಸ್ ಸಂಸದರಿದ್ದಾರೆ....

Published On :
ಹುಬ್ಬಳ್ಳಿ: ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ದಿಸಬೇಕೆಂದು ಬಯಸಿದ್ದ ಹಿರಿಯ ನಟಿ ಸುಮಲತಾ ಅಂಬರೀಷ್ ಅವರಿಗೆ ಭಾರೀ ಹಿನ್ನಡೆಯಾಗಿದೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮಂಡ್ಯ ಕ್ಷೇತ್ರದಿಂದ ಸುಮಲತಾ ಅಂಬರೀಷ್ ಅವರಿಗೆ ಟಿಕೆಟ್ ಕೊಡಲು ಸಾಧ್ಯವಿಲ್ಲ, ಈಗಾಗಲೇ ಮಂಡ್ಯದಲ್ಲಿ ಜೆಡಿಸ್ ಸಂಸದರಿದ್ದಾರೆ. ಹಾಲಿ ಸಂಸದರಿರುವಾಗ ಕ್ಷೇತ್ರ ಬಿಟ್ಟುಕೊಡುವಂತೆ ಕೇಳಲು ಸಾಧ್ಯವಿಲ್ಲ, ಮೈತ್ರಿ ನಿರ್ಧಾರದಂತೆ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡಲಾಗುವುದು ಎಂದು ಹೇಳಿದ್ದಾರೆ.
ಇನ್ನೂ ಸುಮಲತಾ ಪಕ್ಷೇತ್ರರಾಗಿ ನಿಲ್ಲುವ ವಿಚಾರ ಅವರಿಗೆ ಬಿಟ್ಟದ್ದು ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್JDSPoliticsರಾಜಕೀಯSiddaramaiahಸಿದ್ದರಾಮಯ್ಯಜೆಡಿಎಸ್ಮಂಡ್ಯMandyaಲೋಕಸಭೆ ಚುನಾವಣೆLok Sabha polls
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


